ಶ್ರಾವಣಿ ಮಾರುತಿ ಕಾಳೆ (18) ಮೃತ ವಿದ್ಯಾರ್ಥಿನಿ. ಕನಕದಾಸ ಕಾಲೇಜ್‌ನಲ್ಲಿ ಓದುತ್ತಿದ್ದ ಈ ವಿದ್ಯಾರ್ಥಿನಿ, ವಾಣಿಜ್ಯ ವಿಭಾಗದಲ್ಲಿ ಶೇ. 71ರಷ್ಟು ಅಂಕ ಪಡೆದಿದ್ದಳು. ಶೇ. 85ರಷ್ಟು ಫಲಿತಾಂಶ ಬರುವ ನಿರೀಕ್ಷೆ ಇಟ್ಟುಕೊಂಡಿದ್ದಳು. ನಿರೀಕ್ಷಿತ ಅಂಕ ಬಾರದ್ದರಿಂದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ವಿದ್ಯಾನಗರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.