ಗರಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಕಿ ಪೂರ್ಣಿಮಾ ವಡ್ಡರ ನಿವಾಸಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರು ಭಾನುವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
Published on:
Copied
Follow Us
ಧಾರವಾಡ: ತಾಲೂಕಿನ ಗರಗ ಗ್ರಾಮದಲ್ಲಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಕಿ ಪೂರ್ಣಿಮಾ ವಡ್ಡರ ನಿವಾಸಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರು ಭಾನುವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಕುಟುಂಬಸ್ಥರು, ತನಿಖಾಧಿಕಾರಿಯಾದ ಪಿಎಸ್‌ಐ ಸಿದ್ದರಾಮಪ್ಪ ಉನ್ನದ ಅವರು ಪ್ರಕರಣ ದಾಖಲಿಸಿಕೊಂಡಿಲ್ಲ. ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಾಮಕ್ಕೆ ಸಚಿವರು ಬರುವ ಮಾಹಿತಿ ಪಡೆದು, ಸ್ಥಳಕ್ಕೆ ಆಗಮಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರಿಂದ ಮಾಹಿತಿ ಪಡೆದ ಪ್ರಲ್ಹಾದ ಜೋಶಿ, ಪ್ರಕರಣ ಕುರಿತಂತೆ ಸ್ಪಷ್ಟನೆ ನೀಡಬೇಕು. ಸಿಪಿಐ, ಪಿಎಸ್‌ಐ ಮೇಲೆ ಎಫ್‌ಐಆರ್ ದಾಖಲಿಸಬೇಕು. ಪಿಎಸ್‌ಐ ಅವರನ್ನು ಅಮಾನತು ಮಾಡಬೇಕು ಎಂದು ಸೂಚಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಪೊಲೀಸರೇ ಒಂದು ಲಕ್ಷ ದುಡ್ಡು ಕೊಡಿಸಿ, ಸಂದಾನ ಮಾಡಿದ್ದಾರೆ ಎಂದರೆ ಏನಿದು ವ್ಯವಸ್ಥೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದಲಿತ ಕುಟುಂಬಕ್ಕೆ ಅನ್ಯಾಯವಾಗಿದೆ. ಸಮಾಜ ಕಲ್ಯಾಣ ಇಲಾಖೆ ಅಽಕಾರಿಗಳು ಇಲ್ಲಿ ಭೇಟಿ ನೀಡಿಲ್ಲ. ಸರ್ಕಾರದ ವ್ಯವಸ್ಥೆ ಕೆಟ್ಟು ಹೋಗಿದೆ. ಮೇಲಿನಿಂದ ಕೆಳಮಟ್ಟದವರೆಗೂ ಭ್ರಷ್ಟಾಚಾರ ಇದೆ. ದುಡ್ಡು ಕೊಟ್ಟು ಪೋಸ್ಟಿಂಗ್ ಮಾಡಿಸಿಕೊಂಡು ಬಂದು, ಠಾಣೆಯಲ್ಲಿ ದುಡ್ಡು ಪಡೆದು, ಪ್ರಕರಣ ಮುಗಿಸುತ್ತಾರೆ. ಇದು ಭ್ರಷ್ಟಾಚಾರದ ಪರಮಾವಧಿಯಾಗಿದೆ ಸಿಡಿಮಿಡಿಗೊಂಡರು.
ಈ ಪ್ರಕರಣದಲ್ಲಿ ಒತ್ತಡ ಹಾಕಿದ ನಂತರ ಎಸ್‌ಪಿ ಅವರು ಕ್ರಮ ಕೈಗೊಳ್ಳುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಽಕಾರಿಗಳ ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಜಿಲ್ಲಾಽಕಾರಿ ಮತ್ತು ಸಮಾಜ ಕಲ್ಯಾಣ ಅಧಿಕಾರಿಗೆ ಕುಟುಂಬಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ಇದೆ. ಈ ವಿಷಯದಲ್ಲಿ ಕಾಂಗ್ರೆಸ್ ಬಿಜೆಪಿ ಎನ್ನದೇ ಕಾನೂನು ರೀತಿ ಕ್ರಮ ಆಗಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಆಗಲಿದೆ ಎಂದು ಎಚ್ಚರಿಕೆ ನೀಡಿದರು.