ಸುರೇಂದ್ರ ದಾನಿ ಜನ್ಮಶತಮಾನೋತ್ಸವ 27ಕ್ಕೆ centenary

 ಸುರೇಂದ್ರ ದಾನಿ ಜನ್ಮಶತಮಾನೋತ್ಸವ (centenary ) ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಶ್ಯಾಮಸುಂದರ ಬಿದರಕುಂದಿ,
ಸುರೇಂದ್ರ ದಾನಿ ಜನ್ಮಶತಮಾನೋತ್ಸವ (centenary ) ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಶ್ಯಾಮಸುಂದರ ಬಿದರಕುಂದಿ,
Published on

ಪ್ರಮುಖ ಮುಖ್ಯಾಂಶಗಳು

  • ಸಾಕ್ಷ್ಯಚಿತ್ರ ಪ್ರದರ್ಶನ ಏರ್ಪಡಿಸಲಾಗುವುದು.
  • ಎರಡು ಗೋಷ್ಠಿಗಳನ್ನು ಆಯೋಜಿಸಲಾಗಿದೆ.
  • ಸ್ಮರಣ ಸಂಚಿಕೆ ಬಿಡುಗಡೆ
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಡಾ. ಶ್ಯಾಮಸುಂದರ ಬಿದರಕುಂದಿ, ಜನ್ಮಶತಮಾನೋತ್ಸವ ನಿಮಿತ್ತ ಸವಿಸಂಪುಟ ಹೆಸರಿನ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
ಅಂದು ಬೆಳಗ್ಗೆ 9.30ಕ್ಕೆ ಲಘು ಸಂಗೀತ ಏರ್ಪಡಿಸಲಾಗಿದೆ. 10 ಗಂಟೆಗೆ ನಡೆಯಲಿರುವ ಉದ್ಘಾಟನೆ ಹಾಗೂ ಸ್ಮರಣ ಸಂಚಿಕೆ ಬಿಡುಗಡೆಯ ಸಾನ್ನಿಧ್ಯವನ್ನು ಹುಬ್ಬಳ್ಳಿ ಅದ್ವೈತ ವಿದ್ಯಾಶ್ರಮದ ಶ್ರೀ ಪ್ರಣವಾನಂದ ತೀರ್ಥರು ವಹಿಸುವರು. ಪದ್ಮಶ್ರೀ ಡಾ. ಎಂ.ಎಂ. ಜೋಶಿ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ಮಾಜಿ ಸಂಸದ ಪ್ರೊ. ಐ.ಜಿ. ಸನದಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹಾಗೂ ಇನ್ನಿತರರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಹಿರಿಯ ಪತ್ರಕರ್ತ ಸುರೇಂದ್ರ ದಾನಿ ಅವರ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ಏರ್ಪಡಿಸಲಾಗುವುದು. ಮಧ್ಯಾಹ್ನ 12.30ಕ್ಕೆ ದಾನಿ ಅವರ ಪ್ರವೃತ್ತಿಗಳು ಹಾಗೂ ದಾನಿಯವರ ಗಮಕ ಪ್ರೀತಿಯ ಕುರಿತು ಎರಡು ಗೋಷ್ಠಿಗಳನ್ನು ಆಯೋಜಿಸಲಾಗಿದೆ.
ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಹಿರಿಯ ಪತ್ರಕರ್ತರು ಭಾಗವಹಿಸುವರು ಎಂದು ಹೇಳಿದರು.
ಶ್ರೀಕೃಷ್ಣ ಸಂಪಗಾಂವಕರ, ಸುಧೀಂದ್ರ ದೇಶಪಾಂಡೆ, ಶಂಕರ ಪಾಟೀಲ, ನರಸಿಂಹರಾವ ಸೋಮಲಾಪೂರ, ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net