swaranjali ಹುಬ್ಬಳ್ಳಿಯ ಈಶ್ವರಿ ಫೌಂಡೇಷನ್ ವತಿಯಿಂದ ಸವಾಯಿ ಗಂಧರ್ವ ಹಾಲ್ನಲ್ಲಿ ಆಯೋಜಿಸಿದ್ದ ಸ್ವರಾಂಜಲಿ ಸಂಗೀತ ಕಾರ್ಯಕ್ರಮವನ್ನು ಸ್ವರ್ಣ ಸಮೂಹ ಸಂಸ್ಥೆಯ ಎಂಡಿ ಡಾ. ವಿ.ಎಸ್.ವಿ. ಪ್ರಸಾದ ಉದ್ಘಾಟಿಸಿದರು. ಎಂಎಲ್ಸಿ ಪ್ರದಿಪ ಶೆಟ್ಟರ್, ಈಶ್ವರಿ ಫೌಂಡೇಷನ್ ಅಧ್ಯಕ್ಷ ಸಂತೋಷ ವೆರ್ಣೇಕರ, ಮೇಯರ್ ಜ್ಯೋತಿ ಪಾಟೀಲ, ಸಂಕಲ್ಪ ಶೆಟ್ಟರ, ಇತರರು ಇದ್ದರು.
ಹುಬ್ಬಳ್ಳಿ: swaranjali ನಗರದ ಈಶ್ವರಿ ಫೌಂಡೇಷನ್ 5ನೇ ವಾರ್ಷಿಕೋತ್ಸವದ ಅಂಗವಾಗಿ ಸವಾಯಿ ಗಂಧರ್ವ ಹಾಲ್ನಲ್ಲಿ ಅನಾಥರ ಸಹಾಯಕ್ಕಾಗಿ ಏರ್ಪಡಿಸಿದ್ದ ಸ್ವರಾಂಜಲಿ ಸಂಗೀತ ಕಾರ್ಯಕ್ರಮ ಜನಮನ ಸೂರೆಗೊಂಡಿತು.
ವಿಧಾನ ಪರಿಷತ್ ಸದಸ್ಯ ಪ್ರದಿಪ ಶೆಟ್ಟರ ಹಾಗೂ ಸ್ವರ್ಣ ಸಮೂಹ ಸಂಸ್ಥೆಯ ಎಂಡಿ ಡಾ. ವಿ.ಎಸ್.ವಿ. ಪ್ರಸಾದ ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿದ ಪ್ರದಿಪ ಶೆಟ್ಟರ, ಈಶ್ವರಿ ಫೌಂಡೇಷನ್ ಪ್ರಾರಂಭವಾಗಿ 5 ವರ್ಷಗಳಾಗಿದ್ದು, ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಬಂದಿದೆ. ಸಂಸ್ಥೆ ಅಧ್ಯಕ್ಷ ಸಂತೋಷ ವೇರ್ಣೇಕರ ಅನೇಕ ಜನರಿಗೆ ಸಹಾಯ ಹಸ್ತ ನೀಡಿದ್ದಾರೆ. ಉಚಿತ ಕಾಲು ಜೋಡಣೆ, ಉಚಿತ ಕಣ್ಣಿನ ಚಿಕಿತ್ಸೆ ಹಾಗೂ ಬಹಳ ಸಾಂಸತಿಕ ಸಾಮಾಜಿಕ ಕಾರ್ಯಕ್ರಮ ಮಾಡಿ ಮಾದರಿಯಾಗಿದ್ದಾರೆ ಎಂದರು.
ಡಾ. ವಿ.ಎಸ್.ವಿ. ಪ್ರಸಾದ ಮಾತನಾಡಿ, ಸಂಗೀತ ಕೇಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಸಂಗೀತದಿಂದ ಹಲವು ರೋಗಗಳು ನಿವಾರಣೆ ಆಗುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ನಗರದಲ್ಲಿ ಇಂತಹ ಸಂಗೀತ ಕಾರ್ಯಕ್ರಮಗಳು ಹೆಚ್ಚು ನಡೆಯಲಿ ಎಂದು ಆಶಿಸಿದರು.
ಅತಿಥಿಯಾಗಿದ್ದ ಮೇಯರ್ ಜ್ಯೋತಿ ಪಾಟೀಲ್ ಮಾತನಾಡಿ, ಫೌಂಡೇಷನ್ ಜನಪರ ಕಾರ್ಯಗಳು ಇನ್ನಷ್ಟು ಮುಂದುವರಿಯಲಿ, ಪ್ರತಿ ವರ್ಷ ಇಂತಹ ಸಂಗೀತ ಕಾರ್ಯಕ್ರಮಗಳನ್ನು ಮಾಡಿ ಜನರ ಮನಸ್ಸನ್ನು ಹಗುರ ಮಾಡಲಿ, ಎಲ್ಲ ಕ್ಷೇತ್ರಗಳಲ್ಲಿ ಬೆಳೆಯಲಿ ಎಂದು ಹೇಳಿದರು. ಎಸ್ಎಸ್ ಶೆಟ್ಟರ್ ಫೌಂಡೇಷನ್ ಸಂಕಲ್ಪ ಶೆಟ್ಟರ ಮಾತನಾಡಿದರು.