ಸಂಘಟನೆಯ ಧ್ಯೇಯದೊಂದಿಗೆ ಕಾರ್ಯನಿರ್ವಹಿಸಿದರೆ ಉದ್ದೇಶಗಳು ಈಡೇರಲು ಸಾಧ್ಯ
ಪ್ರತಿಭಾನ್ವಿತ ವಿದ್ಯಾರ್ಥಿಗನ್ನು ಸನ್ಮಾನಿಸಲಾಯಿತು.
ಬಿ.ವಿ.ಬಿ. ಇಂಜಿನಿಯರಿಅಗ್ ಕಾಲೇಜು ಆವರಣದಲ್ಲಿರುವ ಬಯೋಟೆಕ್ ಆಡಿಟೋರಿಯಂನಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯುಗಾರ ಉದ್ಘಾಟಿಸಿ, ಅವರು ಮಾತನಾಡಿದರು.
ಜಿಲ್ಲೆಯ ಉಪನ್ಯಾಸಕರು ವರ್ಷದಲ್ಲಿ ಕನಿಷ್ಠ ಎರಡು ಬಾರಿ ಕುಟುಂಬ ಸಮೇತರಾಗಿ ಒಂದೆಡೆ ಸೇರಿ, ಶಿಕ್ಷಕರ ಸಮಸ್ಯೆಗಳನ್ನು ಆಲಿಸುವ ಮೂಲಕ ಅವರ ವಿಶ್ವಾಸ ಗಳಿಸಬೇಕು. ಇದರಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಶಿಕ್ಷಕರ ಹಕ್ಕುಗಳ ರಕ್ಷಣೆಯ ಅಗತ್ಯ ಎದುರಾದಾಗ ಸರ್ಕಾರದ ಮುಂದೆ ದೃಢವಾದ ನಿಲುವು ತಳೆಯುವ ಸಾಮರ್ಥ್ಯ ಸಂಘಟನೆಗೆ ಇರಬೇಕು ಎಂದು ಹೇಳಿದರು.
ಪ್ರೊ. ಕುಮಾರಸ್ವಾಮಿ ಮೇವುಂಡಿಮಠ ಅವರು ಶೈಕ್ಷಣಿಕ ಕಾರ್ಯುಗಾರದ ಕುರಿತು ಉಪನ್ಯಾಸ ನೀಡಿದರು.
ಧಾರವಾಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 18 ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಈ ವರ್ಷ ನಿವೃತ್ತರಾದ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಉಪನಿರ್ದೇಶಕಿ ಡಾ. ತೇಜಸ್ವಿನಿ ನಾರಾಯಣಕರ ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿಕಟಪೂರ್ವ ಅಧ್ಯಕ್ಷ ಡಿ. ಹನುಮಂತಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.