SIR ಎಸ್​ಐಆರ್ ಗಂಭೀರವಾಗಿ ಪರಿಗಣಿಸಿ

SIR ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಎಸ್​ಐಆರ್ ಹಾಗೂ ಮನ್ ಕಿ ಬಾತ್ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ತಿಪ್ಪಣ್ಣ ಮಜ್ಜಗಿ ಮಾತನಾಡಿದರು.
SIR ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಎಸ್​ಐಆರ್ ಹಾಗೂ ಮನ್ ಕಿ ಬಾತ್ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ತಿಪ್ಪಣ್ಣ ಮಜ್ಜಗಿ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸೆಂಟ್ರಲ್ ಕ್ಷೇತ್ರವು ಸಂಘಟನೆಯಲ್ಲಿ ಮುಂಚೂಣಿಯಲ್ಲಿದೆ.
  • ಮನ್ ಕಿ ಬಾತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.
  • ಶೇ. 100ರಷ್ಟು ಮತದಾರರ ಪರಿಷ್ಕರಣೆ ಮಾಡಬೇಕು.
ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ಹು-ಧಾ ಸೆಂಟ್ರಲ್ ಕ್ಷೇತ್ರವು ಸಂಘಟನೆಯಲ್ಲಿ ಮುಂಚೂಣಿಯಲ್ಲಿದೆ.
ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ಬಿಎಲ್​ಎಗಳು, ಆಯಾ ವಾರ್ಡ್​ಗಳ ಅಧ್ಯಕ್ಷರು, ಮುಖಂಡರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಕ್ಷೇತ್ರದ ಬಿಎಲ್​ಎ ಪ್ರಶಾಂತ ಜಾಧವ ಮಾತನಾಡಿ, ಸೆಂಟ್ರಲ್ ಕ್ಷೇತ್ರದಲ್ಲಿ ಶೇ. 100ರಷ್ಟು ಮತದಾರರ ಪರಿಷ್ಕರಣೆ ಮಾಡಬೇಕು ಎಂದರು.
ಕೇರಳ ಪ್ರವಾಸದಲ್ಲಿರುವ ಶಾಸಕ ಮಹೇಶ ಟೆಂಗಿನಕಾಯಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿ, ಎಸ್​ಐಆರ್​ನಲ್ಲಿ ಮಂಡಲ, ಬೂತ್ ಮಟ್ಟದಲ್ಲಿ ಕಡ್ಡಾಯವಾಗಿ ಎಲ್ಲರೂ ಪಾಲ್ಗೊಳ್ಳಬೇಕು. ಮನ್ ಕಿ ಬಾತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಮಲ್ಲಿಕಾರ್ಜುನ ಮರಿಗೌಡರ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆಯ ಸದಸ್ಯೆ ಉಮಾ ಮುಕುಂದ, ರಾಮನಗೌಡ ಶೆಟ್ಟನಗೌಡರ, ಅಕ್ಕಮ್ಮ ಹೆಗಡೆ, ಸಿದ್ದು ಮೊಗಲಿಶೆಟ್ಟರ, ರವಿ ನಾಯಕ, ಕೃಷ್ಣ ಗಂಡಗಾಳೇಕರ, ಪ್ರಶಾಂತ ಹಾವಣಗಿ, ಚೇತನ ಬರದ್ವಾಡ, ಲೀಲಾವತಿ ಪಾಸ್ತೆ, ಹರೀಶ ಜಂಗಲಿ, ಶಶಿ ಡಂಗನವರ, ಪ್ರವೀಣ ಬೆಳಗಲಿ, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net