taluq panchayat ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯ ಕಲ್ಪಿಸಿ

ಹುಬ್ಬಳ್ಳಿಯ ತಾಲೂಕು ಆಡಳಿತ ಸೌಧದ taluq panchayat ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಮಾತನಾಡಿದರು.
ಹುಬ್ಬಳ್ಳಿಯ ತಾಲೂಕು ಆಡಳಿತ ಸೌಧದ taluq panchayat ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಮಾತನಾಡಿದರು.
Published on
ಹುಬ್ಬಳ್ಳಿ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಗ್ರಂಥಾಲಯ, ಶಿಕ್ಷಣ, ಆರೋಗ್ಯ, ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಮೂಲ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು taluq panchayat ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸೂಚಿಸಿದರು.
ಇಲ್ಲಿಯ ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರವಾಗಿ ದುರಸ್ತಿ ಮಾಡಬೇಕು. ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಗಿಡಗಂಟಿಗಳನ್ನು ತೆರವು ಮಾಡಬೇಕು. ಹಳೆಯ ಬೋರವೆಲ್ ಮೋಟಾರ್ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು. ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ಶಾಲಾ ಮಕ್ಕಳಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕು. ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿನ ಶೌಚಾಲಯ ದುರಸ್ತಿ ಮಾಡಬೇಕು. ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಳೆಗಾಲದಲ್ಲಿ ಶಿಥಿಲ ಶಾಲಾ ಕಟ್ಟಡಗಳು ಬೀಳುವ ಹಂತದಲ್ಲಿರುತ್ತವೆ. ಅವುಗಳ ಪಟ್ಟಿ ತಯಾರಿಸಿ ಒದಗಿಸಬೇಕು. ರೇಷ್ಮೆ ಕೃಷಿ ಬಗ್ಗೆ ಗ್ರಾಮೀಣ ಭಾಗದಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಲು ರೇಷ್ಮೆ ಇಲಾಖೆ ಮುಂದಾಗಬೇಕು. ಬೀದಿ ದೀಪಗಳು, ಬೋರವೆಲ್ಗಳ ಮಾಹಿತಿ ಸಂಗ್ರಹಿಸಿ ಮೇಲಧಿಕಾರಿಗಳಿಗೆ ನೀಡಬೇಕು. ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ ಎಂದರು.
ಜಿಲ್ಲಾ ಮುಖ್ಯ ರಸ್ತೆ, ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಸಿ ನೆಡುವುದರ ಜತೆಗೆ ಅವುಗಳ ನಿರ್ವಹಣೆ ಮಾಡಬೇಕು. ಸಾರ್ವಜನಿಕರಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಬೇಕು. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ನಂತರದ ವಸತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರೈತರಿಗೆ ಸೋಯಾ, ಅವರೆ, ಹೆಸರು, ಉದ್ದು, ತೊಗರಿ, ಶೇಂಗಾ, ಮೆಕ್ಕೆಜೋಳ ಬಿತ್ತನೆ ಬೀಜ ವಿತರಿಸಲಾಗುತ್ತಿದ್ದು, ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಪಂ ಇಒ ಡಾ.ರಾಮಚಂದ್ರ ಹೊಸಮನಿ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಮೇಲಧಿಕಾರಿಗಳ ಗಮನಕ್ಕೆ ತರಬೇಕು. ರಸ್ತೆ ಅಭಿವೃದ್ಧಿ, ಚರಂಡಿ ದುರಸ್ತಿ ಸೇರಿದಂತೆ ಹಲವಾರು ಕಾರ್ಯಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದರು.
ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಜೆ.ಬಿ. ಮಜ್ಜಗಿ ಮಾತನಾಡಿ, ಮುಂದಿನ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಬೆಣ್ಣೆಹಳ್ಳ ಹತ್ತಿರ ಸಾರ್ವಜನಿಕರು ಹಾಗೂ ಜಾನುವಾರುಗಳು ಪ್ರವೇಶದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಾಣ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆಗಳ ಪ್ರಗತಿ ವರದಿ ಮಂಡಿಸಿದರು.
ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಕುರ್ತಕೋಟಿ, ತಾಪಂ ಯೋಜನಾಧಿಕಾರಿ ಸಿ.ಆರ್. ಕೌಜಗೇರಿ, ನರೇಗಾ ಯೋಜನೆ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ, ಸಹಾಯಕ ಲೆಕ್ಕಾಧಿಕಾರಿ ಅಶೋಕ ಯತ್ತಿನಹಳ್ಳಿ, ಗ್ರೇಡ್ 2 ತಹಸೀಲ್ದಾರ್ ಶಿವಾನಂದ ಹೆಬ್ಬಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಾಗರತ್ನಾ ಕ್ಯಾಸನೂರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಎಂ.ಬಿ. ಸಣ್ಣೇರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಡಾ. ಸಂಗಮೇಶ ಬಂಗಾರಿಮಠ, ವಲಯ ಅರಣ್ಯಾಧಿಕಾರಿ ಆರ್.ಎಸ್. ಉಪ್ಪಾರ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಜಿತಕುಮಾರ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net