IGH college ಹುಬ್ಬಳ್ಳಿಯ ಉಣಕಲ್ಲ ತರಳಬಾಳು ಕ್ಯಾಂಪಸ್ನಲ್ಲಿ ಏರ್ಪಡಿಸಿದ್ದ ತರಳಬಾಳು ಕಲಾ ಸೌರಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಕೆಎಲ್ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ ಉದ್ಘಾಟಿಸಿದರು. ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಆರ್.ವಿ. ಪಾಟೀಲ, ಶಿವಾನಂದ ಹೆಬಸೂರ, ಶಿವಣ್ಣ ಹಂಗರಕಿ, ಸೋಮನಗೌಡ ಪಾಟೀಲ, ಇತರರು ಪಾಲ್ಗೊಂಡಿದ್ದರು.
Published on:
Copied
Follow Us
ಇಲ್ಲಿಯ ಉಣಕಲ್ಲ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆರ್.ಕೆ. ಕೊಕಾಟಿ ಪ್ರೌಢಶಾಲೆ, ಐ.ಜಿ. ಹಿರೇಗೌಡರ ಪದವಿಪೂರ್ವ ಕಾಲೇಜು ವತಿಯಿಂದ ಏರ್ಪಡಿಸಿದ್ದ ತರಳಬಾಳು ಕಲಾ ಸೌರಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಗುರುವಿನ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು ಎಂದರು.
ಅತಿಥಿಗಳಾಗಿದ್ದ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮಾತನಾಡಿ, ದ್ವೀತಿಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆಗೆ ಕೀರ್ತಿ ತರಬೇಕೆಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆ ಸ್ಥಳಿಯ ಸಲಹಾ ಸಮಿತಿ ಅಧ್ಯಕ್ಷ ಆರ್.ವಿ. ಪಾಟೀಲ ಮಾತನಾಡಿದರು.
ಶಾಲೆ, ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು.