teacher ಹುಬ್ಬಳ್ಳಿಯ ಐಬಿಎಂಆರ್ ಬಿ.ಇಡಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಡಾ. ರೇಖಾ ಮಹೇಂದ್ರಕರ ಉದ್ಘಾಟಿಸಿದರು. ಡಾ. ಶಂಕರ ಚಕ್ರವರ್ತಿ ಇತರರು ಇದ್ದರು.
ಇಲ್ಲಿಯ ವಿದ್ಯಾನಗರ ಅಕ್ಷಯ ಕಾಲನಿಯಲ್ಲಿರುವ ಐಬಿಎಂಆರ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸರಸ್ವತಿ ಪೂಜೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಶಿಕ್ಷಕರಿಂದ ಬಹಳಷ್ಟನ್ನು ಕಲಿಯುತ್ತಾರೆ. ಹಾಗಾಗಿ ಎಲ್ಲರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ವೃತ್ತಿ ಗೌರವ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಶಂಕರ ಚಕ್ರವರ್ತಿ ಅವರು ಮಾತನಾಡಿ, ಶಿಕ್ಷಕ ವೃತ್ತಿಯು ದೇವರು ನೇಮಿಸಿದ ಕಾಯಕವಾಗಿದ್ದು, ಇದನ್ನು ಸತತ ಪರಿಶ್ರಮ ಮತ್ತು ತಪಸ್ಸಿನಿಂದ ಪಡೆದುಕೊಳ್ಳಬೇಕು.ಎಲ್ಲರೂ ಉತ್ತಮ ಶಿಕ್ಷಕರಾಗಲು ಪ್ರಯತ್ನಿಸಬೇಕು ಎಂದರು.