ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ಟ್ ಇತ್ತೀಚೆಗೆ ನೀಡಿರುವ ಆದೇಶದಿಂದ ದೇಶದ ಸುಮಾರು 17 ಲಕ್ಷ ಶಿಕ್ಷಕರು ಆತಂಕಗೊಂಡಿದ್ದಾರೆ. 2010ಕ್ಕೆ ಮುಂಚೆ ನೇಮಕವಾದ ಶಿಕ್ಷಕರಿಗೆ ಟಿಇಟಿಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ನಲ್ಲಿ ಹಿಂದಿನ ಆದೇಶವನ್ನೇ ಎತ್ತಿ ಹಿಡಿಯಲಾಗಿದೆ ಎಂದರು.