ಹುಬ್ಬಳ್ಳಿಯಲ್ಲಿ (teachers union) ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಮಾತನಾಡಿದರು. ವಿ.ಎಸ್. ಹುದ್ದಾರ, ಕಾರ್ಯದರ್ಶಿ ಎನ್.ಎನ್. ಸವಣೂರ, ಎಂ.ಕೆ. ಲಮಾಣಿ, ಎಸ್.ವಿ. ಪಟ್ಟಣಶೆಟ್ಟಿ, ಬಿ.ಕೆ. ಮಳಗಿ ಇದ್ದರು.
Published on:
Copied
Follow Us
ಹುಬ್ಬಳ್ಳಿ: ರಾಜ್ಯದಲ್ಲಿನ (Teachers Union) ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ ನೌಕರರ ಬೇಡಿಕೆಗಳನ್ನು ಬೆಳಗಾವಿ ಅಧಿವೇಶನದಲ್ಲಿ ಈಡೇರಿಸಬೇಕು. ತಪ್ಪಿದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದ ಬದಲು ಕನಿಷ್ಠ 10 ವರ್ಷಗಳಿಗೊಮ್ಮೆ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಶಾಲೆಗಳಿಗೆ ಇಲ್ಲದ ಮಾನದಂಡಗಳನ್ನು ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ಅನ್ವಯಿಸಿರುವುದನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.
ಹಾಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಹಳೇ ಪಿಂಚಣಿ ಯೋಜನೆ (ಒಪಿಎಸ್)ಯನ್ನು ಜಾರಿಗೆ ತರಲಾಗುವುದು ಎಂದು ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿತ್ತು. ಅದರ ಜಾರಿಗೆ ಒತ್ತಾಯಿಸುತ್ತಿದ್ದೇವೆ. ಸರ್ಕಾರ ಜಾರಿಗೆ ತಂದ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ನೌಕರರಿಗೂ ವಿಸ್ತರಿಸಬೇಕು. ಖಾಲಿ ಹುದ್ದೆಗಳನ್ನು ತುಂಬಲು ಸರ್ಕಾರ ಶೀಘ್ರವೇ ಆದೇಶ ಹೊರಡಿಸಬೇಕು. 1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಒದಗಿಸಲು ಮುಖ್ಯಮಂತ್ರಿಯವರು ಶಿಫಾರಸ್ಸು ಮಾಡಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ವಿ.ಎಸ್. ಹುದ್ದಾರ, ಕಾರ್ಯದರ್ಶಿ ಎನ್.ಎನ್. ಸವಣೂರ, ಎಂ.ಕೆ. ಲಮಾಣಿ, ಎಸ್.ವಿ. ಪಟ್ಟಣಶೆಟ್ಟಿ, ಬಿ.ಕೆ. ಮಳಗಿ ಇದ್ದರು.