ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಭಾರತೀಯ ರೈಲ್ವೆ ಕೊಡುಗೆ ಅಪಾರ

ರಾಜ್ಯಪಾಲ ಥಾವರಚಂದ ಗೆಹಲೋತ
ರಾಜ್ಯಪಾಲ ಥಾವರಚಂದ ಗೆಹಲೋತ
Published on
ಧಾರವಾಡ: ಭಾರತೀಯ ರೈಲ್ವೆಯು ದೇಶದ ಆರ್ಥಿಕತೆಗೆ ಬಲ ನೀಡಿದೆ. ಭಾರತ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಭಾರತೀಯ ರೈಲ್ವೆ ಕೊಡುಗೆ ಅಪಾರ ಎಂದು ರಾಜ್ಯಪಾಲರಾದ ಥಾವರ್‌ಚಂದ ಗೆಹಲೋತ ಹೇಳಿದರು.
ಅಳ್ನಾವರ ರೈಲು ನಿಲ್ದಾಣದಲ್ಲಿ ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ ಅಳ್ನಾವರ ರೈಲು ನಿಲ್ದಾಣದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಅಮೃತ ಭಾರತ ರೈಲು ನಿಲ್ದಾಣ ಪುನರ್ ಅಭಿವೃದ್ಧಿ ಯೋಜನೆಯಡಿ ದೇಶದಾದ್ಯಂತ 75 ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಪೈಕಿ ರಾಜ್ಯದ ಬಂಟ್ವಾಳ, ಬಾದಾಮಿ, ಕೊಪ್ಪಳ ಹಾಗೂ ಅಳ್ನಾವರ ರೈಲು ನಿಲ್ದಾಣಗಳು ಸೇರಿವೆ. ಅತ್ಯಾಧುನಿಕ ಸೌಲಭ್ಯಗಳನ್ನು ರೈಲು ನಿಲ್ದಾಣಗಳು ಹೊಂದಿವೆ. ಹೈಡ್ರೋಜನ್ ರೈಲಿಗೆ ಚಾಲನೆ ನೀಡಲಾಗಿದ್ದು, ಭಾರತ ಕೂಡ ಹೈಡ್ರೋಜನ್ ರೈಲು ಹೊಂದಿದ ದೇಶಗಳ ಸಾಲಿಗೆ ಸೇರ್ಪಡೆಯಾಗಿದೆ ಎಂದರು.
ಅಳ್ನಾವರ ರೈಲು ನಿಲ್ದಾಣವನ್ನು 17.20 ಕೋಟಿ ರೂ. ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸಲಾಗಿದೆ. ರೈಲು ನಿಲ್ದಾಣಗಳಲ್ಲಿ ಅತ್ಯುತ್ತಮ ಸೇವೆಗಳನ್ನು ಒದಗಿಸಲಾಗುತ್ತಿದೆ. ರೈಲ್ವೆ ವಿದ್ಯುದ್ಧೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ರೈಲುಗಳಿಗೆ ಸಹ ಆಧುನಿಕ ಸ್ಪರ್ಶ ಕಲ್ಪಿಸಲಾಗಿದೆ. ರಾಜ್ಯದ ಜನರ ಏಳಿಗೆಗೆ ರೈಲ್ವೆ ಸೇವೆ ಪೂರಕವಾಗಿದೆ ಎಂದು ಹೇಳಿದರು.
ಕೇಂದ್ರ ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ದೇಶದಾದ್ಯಂತ ಪುನರ್ ನಿರ್ಮಾಣ ಮಾಡಿದ 75 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಾಗಿದೆ. ಅಲ್ಲದೇ ಕೆಳ ಮತ್ತು ಮೇಲ್ಸೇತುವೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಅಳ್ನಾವರ ಹಾಗೂ ದಾಂಡೇಲಿ ರೈಲು ಮಾರ್ಗದ ಭೂ ಸ್ವಾಽÃನ ಮಾಡಿಕೊಡಬೇಕಿದೆ. ಈ ಹಿಂದೆ ಧಾರವಾಡ, ಹುಬ್ಬಳ್ಳಿ ರೈಲು ನಿಲ್ದಾಣಗಳನ್ನು ನವೀಕರಣಗೊಳಿಸಲಾಗಿತ್ತು ಎಂದರು.
ಜಗತ್ತಿನಲ್ಲಿ ರೈಲ್ವೆ ಲೇನ್‌ನಲ್ಲಿ ಭಾರತ ಮೊದಲ ಸ್ಥಾನ ಪಡೆದಿದೆ. ರೈಲ್ವೆ ವಿದ್ಯುದ್ಧೀಕರಣ ಕೂಡ ಪೂರ್ಣಗೊಂಡಿದೆ. ಇಂದು ಡಿಸೇಲ್ ಇಂಜಿನ್ ರೈಲುಗಳು ಬಂದ್ ಆಗಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ವಂದೇ ಭಾರತ್ ರೈಲುಗಳಿಗೆ ಉತ್ತಮ ಬೇಡಿಕೆಯಿದೆ. ಜಮ್ಮು ಮತ್ತು ಕಾಶ್ಮೀರ ಜೋಡಿಸುವ ಕಾರ್ಯ ಕೂಡ ಆಗಿದೆ. ದೇಶದ ರೈಲ್ವೆ ಬಜೆಟ್ ದೊಡ್ಡದಾಗಿದೆ. ಜಗತ್ತಿನಲ್ಲಿ ಹೈಡ್ರೋಜನ್ ರೈಲು ಹೊಂದಿದ 4 ದೇಶಗಳಲ್ಲಿ ಭಾರತ ಕೂಡ ಒಂದು. ಭಾರತ ದೇಶವು ಹಸಿರು ಹೈಡ್ರೋಜನ್ ಉತ್ಪಾದನೆಯ ಹಬ್ ಆಗಲಿದೆ. 14 ವರ್ಷಗಳಲ್ಲಿ ದೇಶದಲ್ಲಿ ಪರಿಣಾಮಕಾರಿ ಬದಲಾವಣೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನರೆನ್ಸ್ ಮೂಲಕ ವರ್ಚುವಲ್ ಆಗಿ ರೈಲು ನಿಲ್ದಾಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗಣ್ಯರು ಪುನರಾಭಿವೃದ್ಧಿಗೊಂಡ ಅಳ್ನಾವರ ರೈಲು ನಿಲ್ದಾಣದ ಶಿಲಾನ್ಯಾಸ ಉದ್ಘಾಟಿಸಿದರು. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಜಿಲ್ಲಾಽಕಾರಿ ಸ್ನೇಹಲ್ ಆರ್., ನೈಋತ್ಯ ರೈಲ್ವೆಯ ಮಹಾ ಪ್ರಬಂಧಕ ಅನಂತ ಪಿ. ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net