ಹೊರಟ್ಟಿ ಅಭಿನಂದನಾ (felicitation) ಸಮಾರಂಭ 13ಕ್ಕೆ

ಹುಬ್ಬಳ್ಳಿಯಲ್ಲಿ ಮಂಗಳವಾರ ಸಭಾಪತಿ ಬಸವರಾಜ ಹೊರಟ್ಟಿ ಅಭಿನಂದನಾ (felicitation) ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಎನ್.ಎಚ್. ಕೋನರಡ್ಡಿ, ಎಸ್.ವಿ. ಸಂಕನೂರ, ಎಚ್.ಎಫ್. ಜಕ್ಕಪ್ಪನವರ, ಕೆಎಲ್​ಇ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ, ಇತರರು ಪಾಲ್ಗೊಂಡಿದ್ದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಸಭಾಪತಿ ಬಸವರಾಜ ಹೊರಟ್ಟಿ ಅಭಿನಂದನಾ (felicitation) ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಎನ್.ಎಚ್. ಕೋನರಡ್ಡಿ, ಎಸ್.ವಿ. ಸಂಕನೂರ, ಎಚ್.ಎಫ್. ಜಕ್ಕಪ್ಪನವರ, ಕೆಎಲ್​ಇ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ, ಇತರರು ಪಾಲ್ಗೊಂಡಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತೆರೆದ ವಾಹನದಲ್ಲಿ ಮೆರವಣಿಗೆ.
  • ರಾಜಕೀಯ ಜೀವನದ ಕಿರು ವಿಡಿಯೋ ಅನ್ನು ಪ್ರದರ್ಶಿಸಬೇಕು.
  • 10 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಬೇಕು.
ನಗರದಲ್ಲಿ ಮಂಗಳವಾರ ಅಭಿಮಾನಿಗಳ ಸಂಘ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಡಾ.ಪ್ರಭಾಕರ ಕೋರೆ ಸೇರಿದಂತೆ ಹಾಲಿ ಹಾಗೂ ಮಾಜಿ ಸಚಿವರು, ಶಾಸಕರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.
ಸಭಾಪತಿ ಹೊರಟ್ಟಿ ಅವರನ್ನು ನಗರದ ಲ್ಯಾಮಿಂಗ್ಟನ್ ಶಾಲೆಯಿಂದ ನೆಹರು ಮೈದಾನದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆ ತರಬೇಕು. ಅವರ 45 ವರ್ಷದ ರಾಜಕೀಯ ಜೀವನದ ಕಿರು ವಿಡಿಯೋ ಅನ್ನು ಪ್ರದರ್ಶಿಸಬೇಕು. ಮೆರವಣಿಗೆಯ ಮಾರ್ಗದುದ್ದಕ್ಕೂ ಹೊರಟ್ಟಿ ಅವರ ಜೀವನದ ಪ್ರಮುಖ ಘಟನೆಗಳ ಭಾವಚಿತ್ರಗಳನ್ನು ಪ್ರದರ್ಶನ ಮಾಡಬೇಕು. ಕಾರ್ಯಕ್ರಮಕ್ಕೆ 10 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಬೇಕು. ಬಸವರಾಜ ಹೊರಟ್ಟಿ ಅವರ ಅಭಿನಂದನಾ ಗ್ರಂಥ ಬಿಡುಗಡೆ ಮಾಡಬೇಕು ಎಂಬುದು ಸೇರಿದಂತೆ ಅನೇಕ ಸಲಹೆಗಳು ಸಭೆಯಲ್ಲಿ ಕೇಳಿಬಂದವು.
ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಶಿಕ್ಷಕರು ಹಾಗೂ ಹೊರಟ್ಟಿ ಅವರ ಅಭಿಮಾನಿಗಳನ್ನು ಕರೆತರುವ ಜವಾಬ್ದಾರಿಯನ್ನು ಆಯಾ ವಿಧಾನಸಭೆ ಕ್ಷೇತ್ರದ ಶಾಸಕರಿಗೆ ವಹಿಸಬೇಕೆಂಬ ಅಭಿಪ್ರಾಯ ವ್ಯಕ್ತವಾದವು.
ಕಾರ್ಯಕ್ರಮ ಆಯೋಜನೆಗೆ ವೇದಿಕೆ ಸಮಿತಿ, ಪ್ರಚಾರ ಸಮಿತಿ, ಮುದ್ರಣ ಸಮಿತಿ, ಮೆರವಣಿಗೆ ಸಮಿತಿ ಸೇರಿ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ಹಂಚಲಾಯಿತು.
ಕೆಎಲ್​ಇ ಸಂಸ್ಥೆಯ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎನ್.ಎಚ್. ಕೋನರಡ್ಡಿ, ಎಸ್.ವಿ. ಸಂಕನೂರ, ಎಚ್.ಎಫ್. ಜಕ್ಕಪ್ಪನವರ, ಮಾಜಿ ಶಾಸಕರಾದ ಎಂ.ಎಸ್. ಅಕ್ಕಿ, ಎಸ್.ಐ. ಚಿಕ್ಕನಗೌಡ್ರ, ಮೋಹನ ಲಿಂಬಿಕಾಯಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಮಾಜಿ ಮೇಯರ್ ದಾನಪ್ಪ ಕಬ್ಬೇರ, ಲಿಂಗರಾಜ ಪಾಟೀಲ, ಅರವಿಂದ ಕಟಗಿ, ರವಿ ದಂಡಿನ, ಶಿಕ್ಷಕ ಸಂಘದ ಜಿ.ಆರ್. ಭಟ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net