ಹಿಂದಿನ ವಿಧಾನಸಭೆ ಚುನಾವಣೆಯಲ್ಲಿಯೇ ಬಿಜೆಪಿ ಅಧಿಕಾರಕ್ಕೆ ಬರಬೇಕಿತ್ತು.
ಜನರು ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತಿದ್ದಾರೆ.
2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ.
ಇಲ್ಲಿಯ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿಯೇ ಬಿಜೆಪಿ ಅಧಿಕಾರಕ್ಕೆ ಬರಬೇಕಿತ್ತು. ಆದರೆ, ಕಾರಣಾಂತರಗಳಿಂದ ಅಧಿಕಾರ ಕೈತಪ್ಪಿತು ಎಂದರು.
ಆದರೆ, 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಜನರು ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿ ನೇತೃತ್ವದ ಎನ್ಡಿಎ ಅಧಿಕಾರಕ್ಕೆ ಬರಲಿದ್ದು, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದರು.
ಈಗಾಗಲೇ ರಾಜ್ಯಾದ್ಯಂತ ಸಂಘಟನೆ ಕಾರ್ಯ ಚುರುಕಾಗಿ ನಡೆಯುತ್ತಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಜನಪರ ಕಾರ್ಯಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.