ಅಭಿವೃದ್ಧಿಯಲ್ಲಿ ಗಣಿತದ ಪಾತ್ರ ಪ್ರಮುಖ

ಗಣಿತ ಪಾರ್ಕ್ ವೀಕ್ಷಣೆ ಹಾಗೂ ಚಟುವಟಿಕೆ ಕಾರ್ಯಕ್ರಮ
ಗಣಿತ ಪಾರ್ಕ್ ವೀಕ್ಷಣೆ ಹಾಗೂ ಚಟುವಟಿಕೆ ಕಾರ್ಯಕ್ರಮ
Published on
ಧಾರವಾಡ: ನಿತ್ಯದ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಾಗೂ ಯಾವುದೇ ಕ್ಷೇತ್ರದ ಅಭಿವೃದ್ಧಿಯಲ್ಲಿ ಗಣಿತವು ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಗಣಿತದಲ್ಲಿ ಜ್ಞಾನ ಸಂಪಾದಿಸಿದರೆ ವಿಪುಲ ಅವಕಾಶಗಳು ದೊರೆಯುತ್ತವೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಗಣಿತ ವಿಭಾಗದ ಪ್ರಾಧ್ಯಾಪಕ ಡಾ. ಎಸ್.ಸಿ. ಶಿರಾಳಶೆಟ್ಟಿ ಹೇಳಿದರು.
ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ, ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಈಚೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಗಣಿತ ಪಾರ್ಕ್ ವೀಕ್ಷಣೆ ಹಾಗೂ ಚಟುವಟಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಗಣಿತ ಹಾಗೂ ವಿಜ್ಞಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಾಯೋಗಿಕವಾಗಿ ಹಾಗೂ ಅನ್ವಯಿಕವಾಗಿ ಅಭ್ಯಾಸ ಮಾಡಬೇಕು ಎಂದರು.
oಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಗಣಿತ ತಜ್ಞ, ನಿವೃತ್ತ ಪ್ರಾಚಾರ್ಯ ಎಸ್.ವಿ. ಬುರ್ಲಿ, ವಿದ್ಯಾರ್ಥಿಗಳಿಗೆ ಗಣಿತ ಮಾದರಿಗಳ ಪ್ರಾಮುಖ್ಯತೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ನಿರ್ದೇಶಕ ಡಾ. ವೀರಣ್ಣ ಬೋಳಿಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿಜ್ಞಾನ ಕೇಂದ್ರದಲ್ಲಿ ಸ್ತಾಪಿಸಿರುವ ಗಣಿತ ಪಾರ್ಕ್ನ ಪರಿಕಲ್ಪನೆಯು ವಿನೂತನವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ವಿಶಾಲಾಕ್ಷಿ ಎಸ್.ಜೆ. ನಿರೂಪಿಸಿದರು. ವಿಜ್ಞಾನ ಕೇಂದ್ರದ ಸಿಬ್ಬಂದಿ, ಪ್ರೌಢಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net