ರಾಜ್ಯದ ಸ್ಥಿತಿ ಸರ್ಕಾರದ (government) ಪತನಕ್ಕೆ ದಾರಿಯಾಗಬಹುದು
Belagavi mp spoke about government failuer
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಬಣ ರಾಜಕಾರಣ ತಾರಕಕ್ಕೆ
ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ.
ರಾಜ್ಯ ಸರ್ಕಾರ ವಿಫಲ
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ ಶೆಟ್ಟರ್, ಅಧಿಕಾರ ಹಂಚಿಕೆ ವಿಷಯವಾಗಿ ಕಾಂಗ್ರೆಸ್ನಲ್ಲಿ ಬಣ ರಾಜಕಾರಣ ತಾರಕಕ್ಕೆ ಹೋಗಿದೆ. ಡಿಸಿಎಂ ಡಿ. ಕೆ. ಶಿವಕುಮಾರ ಬಣ ಈಗಾಗಲೇ ದೆಹಲಿಯಲ್ಲಿದೆ ಎಂದರು.
ಮುಖ್ಯಮಂತ್ರಿ ಸ್ಥಾನವನ್ನು ಡಿ. ಕೆ. ಶಿವಕುಮಾರ ಅವರಿಗೆ ಬಿಟ್ಟುಕೊಡಲು ಸಿಎಂ ಸಿದ್ದರಾಮಯ್ಯಗೆ ಸೂಚಿಸುವಂತೆ ಡಿಕೆಶಿ ಬಣ ದೆಹಲಿಯಲ್ಲಿ ಪಕ್ಷದ ಮುಖಂಡರ ಬಳಿ ಪಟ್ಟು ಹಿಡಿದಿದೆ. ಆದರೆ, ಯಾರಿಗೂ, ಏನನ್ನೂ ಹೇಳದಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೆ ಎಂದು ಹೇಳಿದರು.
ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಾಂಗ್ರೆಸ್ ಒಳಜಗಳದಿಂದಾಗಿ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಒಪ್ಪಂದವಾಗಿತ್ತು ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆ ಬಗ್ಗೆ ಆ ಪಕ್ಷದ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಕಳೆದ ಎರಡ್ಮೂರು ತಿಂಗಳುಗಳಿಂದ ಅಧಿಕಾರ ಹಂಚಿಕೆ ವಿಚಾರ ಜೋರಾಗಿ ಚರ್ಚೆಯಾಗುತ್ತಿದೆ. ಇದರ ಪರಿಣಾಮ ಆಡಳಿತ ಯಂತ್ರದ ಮೇಲಾಗುತ್ತಿದೆ ಎಂದು ಹೇಳಿದರು.
ಅನ್ನದಾತನ ಸಮಸ್ಯೆ ಪರಿಹರಿಸುವಲ್ಲಿಯೂ ರಾಜ್ಯ ಸರ್ಕಾರ ವಿಫಲಗೊಂಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಅಧಿಕಾರಕ್ಕಾಗಿ ಕಚ್ಚಾಟ ತೀವ್ರಗೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಒಂದೆಡೆ ಸಿದ್ದರಾಮಯ್ಯ ಅವರು ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಹೇಳುತ್ತಿದ್ದಾರೆ. ಇನ್ನೊಂದೆಡೆ ಡಿ. ಕೆ. ಶಿವಕುಮಾರ ಹತಾಶವಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದರೆ, ರಾಜ್ಯದಲ್ಲಿಯೂ ಒಬ್ಬ ಏಕನಾಥ ಶಿಂಧೆ ಮತ್ತು ಅಜಿತ ಪವಾರ ಹುಟ್ಟಬಹುದು. ಮುಂದಿನ ದಿನಗಳಲ್ಲಿ ಸರ್ಕಾರ ಪತನವಾಗುತ್ತದೆ ಎಂದು ಶೆಟ್ಟರ್ ಹೇಳಿದ್ದಾರೆ.