ಹುಬ್ಬಳ್ಳಿ: ರಾಜ್ಯ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರಿನ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಅಂದಾಜು 9.90ಲಕ್ಷ ರೂ. ಮೌಲ್ಯದ 165ಗ್ರಾಂ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ಕಳವಾದ (theft) ಘಟನೆ ನಗರದಲ್ಲಿ ನಡೆದಿದೆ.
ತುಮಕೂರು ವಾಲ್ಮೀಕಿ ನಗರದ ಗೀತಾ ಎಂಬುವರ ನಗ-ನಾಣ್ಯ ಕಳವಾಗಿದೆ.
ಇಲ್ಲಿಯ ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದಿಂದ ಹೊಸೂರು ಬಸ್ ಟರ್ಮಿನಲ್ಗೆ ರಾಜ್ಯ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಖದೀಮರು ವ್ಯಾನಿಟಿ ಬ್ಯಾಗ್‌ನಲ್ಲಿದ್ದ ನಗ-ನಾಣ್ಯ ಕದ್ದುಕೊಂಡು ಹೋಗಿದ್ದಾರೆ ಎಂದು ಗೀತಾ, ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.