ಕಾರ್ಮಿಕರಿಗೆ ಸೌಕರ್ಯ ಒದಗಿಸಲು ಮುಂದಾಗಿ

ಜಿಪಂ‌ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ.
ಜಿಪಂ‌ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ.
Published on
ಧಾರವಾಡ: ಕಾರ್ಮಿಕರಿಗೆ ವೇತನ, ಇಎಸ್‌ಐ, ಪಿಎಫ್, ಆರೋಗ್ಯ ವಿಮೆ ಸೇರಿ ಅಗತ್ಯ ಮೂಲ ಸೌಲಭ್ಯ ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಹೇಳಿದರು.
ಜಿಪಂ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು, ಪೌರಕಾರ್ಮಿಕರೊಂದಿಗೆ ಸಂವಾದ ಹಾಗೂ ಅಽಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.
ಹು-ಧಾ ನಗರಗಳಲ್ಲಿ ೮೨ ವಾರ್ಡ್ಗಳು ಇದ್ದು, ವಾರ್ಡ್ಗಳಿಗೆ ಒಂದು ಶೌಚಗೃಹ ನಿರ್ಮಾಣ ಮಾಡಬೇಕು. ಈಗಾಗಲೇ ವಲಯಗಳಿಗನುಸಾರವಾಗಿ ಎರಡು ಶೌಚಗೃಹಗಳಿವೆ. ಅವುಗಳ ಸಂಪರ್ಕ ನಿರ್ವಹಣೆಗೆ ಸಂಬಂಧಪಟ್ಟ ವಲಯ ಆಯುಕ್ತರು ಕ್ರಮ ಕೈಗೊಳ್ಳಬೇಕು. ಪೌರಕಾರ್ಮಿಕರಿಗೆ ಗುಣಮಟ್ಟದ ಉಪಹಾರ ಪೂರೈಕೆ ಮಾಡಬೇಕು. ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ವೇತನ, ಇಎಸ್‌ಐ, ಪಿಎಫ್, ಆರೋಗ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದರು.
ಸೇವಾನಿರತ ಕಾರ್ಮಿಕರು ಮೃತರಾದರೆ, ೧೦ ಲಕ್ಷ ರೂ. ಪರಿಹಾರ ವಿತರಿಸಬೇಕು. ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳು ಹಾಗೂ ಸಮವಸ್ತçಗಳನ್ನು ವಿತರಿಸಬೇಕು. ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ನಿವೇಶನಗಳನ್ನು ನೀಡಬೇಕು. ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಕಲ್ಪಿಸಬೇಕು. ಪೌರಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು.
ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸರಿಯಾದ ಸಮಯದಲ್ಲಿ ವೇತನ ನೀಡಬೇಕು. ವೇತನಕ್ಕೆ ಸಂಬಂಧಿಸಿದ ದೂರುಗಳನ್ನು ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ವಸತಿ ಯೋಜನೆಗಳಡಿ ಮನೆಗಳನ್ನು ಹಂಚಿಕೆ ಮಾಡಬೇಕು. ಅಲ್ಲದೇ ಹೊರಗುತ್ತಿಗೆ ನೌಕರರ ವೇತನ ತಡೆ ಹಿಡಿಯಬಾರದು. ಆಯುಷ್ಮಾನ ಭಾರತ ಕಾರ್ಡ್ ಒದಗಿಸಬೇಕು. ಮ್ಯಾನ್ಯುವಲ್ ಸ್ವಚ್ಛತೆ ಕಾರ್ಮಿಕರಿಂದ ಮಾಡಿಸಬಾರದು. ಈ ಕುರಿತು ದೂರುಗಳು ಬಂದಲ್ಲಿ ಅಽಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.
ಕವಿವಿ ಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ವೇತನ ಒದಗಿಸಬೇಕು. ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಮಸ್ತ ಗಳನ್ನು ವಿತರಿಸಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತು ಕಾರ್ಮಿಕರಿಗೆ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಶಂಕರ, ಮಹಾದೇವ ಸ್ವಾಮಿ, ಜಿಲ್ಲಾಽಕಾರಿ ಸ್ನೇಹಲ್ ಆರ್., ಜಿಪಂ ಸಿಇಒ ಭುವನೇಶ ಪಾಟೀಲ, ಪ್ರೊಬೇಷನರಿ ಐಎಎಸ್ ಅಽಕಾರಿ ಅನುಪ್ರಿಯಾ ಸಾಕ್ಯಾ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ವೇದಿಕೆಯಲ್ಲಿದ್ದರು. ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ, ಪಿಎಫ್ ಇಲಾಖೆ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net