ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜೋಶಿ, ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಮನೆಮನೆ ಸಮೀಕ್ಷೆ ನಡೆಯುತ್ತಿದೆ.
ಸಾರ್ವಜನಿಕರು ತಮ್ಮ ಮನೆಗಳಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಅಗತ್ಯ ದಾಖಲೆ, ಮಾಹಿತಿ ಒದಗಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬ ಮತದಾರರು ಅಗತ್ಯ ದಾಖಲೆ ಹಾಗೂ ಮಾಹಿತಿ ಒದಗಿಸುವ ಮೂಲಕ ಮತಪಟ್ಟಿಯಲ್ಲಿ ಹೆಸರು ಮತ್ತು ವಿವರಗಳನ್ನು ನಿಖರವಾಗಿ, ಸಮರ್ಪಕವಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ದೇಶದ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಪ್ರತಿ ನಾಗರಿಕರ ಸಹಭಾಗಿತ್ವ ಅತ್ಯಂತ ಮಹತ್ವದ್ದಾಗಿದೆ.
ಹಾಗಾಗಿ, ಸರ್ವರೂ ಈ ಎಸ್ಐಆರ್ ಪ್ರಕ್ರಿಯೆಯಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.