ಎಲ್ಲ ವಾರ್ಡ್ ಹಾಗೂ ಬೂತ್ ಮಟ್ಟದಲ್ಲಿ ವಿವಿಧ ಸೇವಾ ಕಾರ್ಯಕ್ರಮ
ಕ್ರಿಯಾಶೀಲ, ಅಜಾತಶತ್ರು ಮೋದಿ ಅವರ ಜನ್ಮದಿನ
ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಭಿಯಾನದ ಪೂರ್ವಭಾವಿ ಸಭೆ
ಹುಬ್ಬಳ್ಳಿ : abhiyan ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಆಯೋಜಿಸಿರುವ ‘ಸೇವಾ ಸಂಕಲ್ಪ ಅಭಿಯಾನ’ ಅಂಗವಾಗಿ ಎಲ್ಲ ವಾರ್ಡ್ ಹಾಗೂ ಬೂತ್ ಮಟ್ಟದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಕಾರ್ಯಕರ್ತರಿಗೆ ಸೂಚಿಸಿದರು.
ಅರವಿಂದ ನಗರದಲ್ಲಿನ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನರೇಂದ್ರ ಮೋದಿ ಅವರು ಸತತ 25 ವರ್ಷಗಳ ಕಾಲ ರಾಜಕೀಯ ಸೇವೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸೇವಾ ಸಂಕಲ್ಪ ಅಭಿಯಾನ ನಡೆಸಲಾಗುತ್ತಿದೆ. ಈ ಒಂದು ತಿಂಗಳ ಕಾಲ ಪಕ್ಷದ ಕಾರ್ಯಕರ್ತರು ಸಂಪುರ್ಣ ಜನ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಕ್ರಿಯಾಶೀಲ, ಅಜಾತಶತ್ರು ಮೋದಿ ಅವರ ಜನ್ಮದಿನ ಸಂಭ್ರಮಿಸುವ ಬದಲು ನಮ್ಮ ನಮ್ಮ ವಾರ್ಡ್ ಗಳಲ್ಲಿ ಸೇವೆ ಮಾಡಬೇಕು ಎಂದು ಹೇಳಿದರು.
ಪ್ರಾಸ್ತಾವಿಕ ಮಾತನಾಡಿದ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಸೆ. 17ರಂದು ಪ್ರಧಾನಿ ಮೋದಿ ಅವರ ಜನ್ಮದಿನ ನಿಮಿತ್ತ ಸೇವಾ ಸಂಕಲ್ಪ ಅಭಿಯಾನ ಆಯೋಜಿಸಲಾಗಿದೆ. ಆ ದಿನದಂದು ಸ್ವದೇಶಿ ನಿರ್ವಿುತ ಮಣ್ಣಿನ ಹಣತೆ ಹಚ್ಚಬೇಕು ಎಂದು ತಿಳಿಸಿದರು. ವಿಕಸಿತ ಭಾರತ ನಿರ್ಮಾಣ ನಿಟ್ಟಿನಲ್ಲಿ ನಾವೆಲ್ಲ ಕೆಲಸ ಮಾಡಬೇಕು. ಮೋದಿ ನಾಯಕತ್ವ, ಆಡಳಿತವನ್ನು ವಿಶ್ವ ನಾಯಕರು ಬಯಸುತ್ತಿದ್ದಾರೆ. ಸೆ. 17ರಿಂದ ಅ.17ರ ವರೆಗೆ ಸೇವಾ ಸಂಕಲ್ಪ ನಡೆಯಲಿದೆ ಎಂದರು.
ಪಾಲಿಕೆ ಸದಸ್ಯ ಶಂಕರ ಶೇಳಕೆ, ಮಂಡಳ ಅಧ್ಯಕ್ಷರಾದ ರಾಜು ಕಾಳೆ, ಬಸವರಾಜ ಗರಗ, ಸಂಜಯ ಕಪಟಕರ, ವಸಂತ ನಾಡಜೋಶಿ, ಮಂಜುನಾಥ ಕಾಟಕರ ಹಾಗೂ ಇತರರಿದ್ದರು. ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ ನಿರೂಪಿಸಿದರು.