veda school ಹುಬ್ಬಳ್ಳಿಯ ವೇದ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ರಂಗಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು.
ಹುಬ್ಬಳ್ಳಿ: ಇಲ್ಲಿಯ ಕುಸುಗಲ್ ರಸ್ತೆಯ ಎಸ್.ಎಸ್. ಶೆಟ್ಟರ್ ಫೌಂಡೇಷನ್‌ನ ವೇದ ಇಂಟರ್‌ನ್ಯಾಷನಲ್ ಶಾಲೆಯಲ್ಲಿ
veda school
80ನೇ ಸ್ವಾತಂತ್ರ್ಯೋತ್ಸವ ದಿನವನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಶಾಲೆ ಅಧ್ಯಕ್ಷ ಸಂಕಲ್ಪ ಶೆಟ್ಟರ್ ಮಾತನಾಡಿ, ಹೋರಾಟಗಾರರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರೃ ಲಭಿಸಿತು. ಹಾಗಾಗಿಯೇ ನಾವು ಸ್ವತಂತ್ರವಾಗಿ ಬದುಕಲು ಸಾಧ್ಯವಾಯಿತು. ಹೋರಾಟಗಾರರನ್ನು ಸದಾ ಸ್ಮರಿಸಿ ಗೌರವಿಸಬೇಕು ಎಂದರು.
ಖ್ಯಾತ ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಮಾತನಾಡಿ, ಪ್ರತಿಯೊಬ್ಬರೂ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸೇನಾನಿಗಳ ತ್ಯಾಗವನ್ನು ಸ್ಮರಿಸಬೇಕು. ದೇಶದ ಪ್ರಗತಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಸಂಕಲ್ಪ ತೊಡಬೇಕು ಎಂದರು.
ಇದೇ ವೇಳೆ ಕ್ರೀಡೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿಲಾಯಿತು.