ವೀರಭದ್ರೇಶ್ವರ (fair) ಜಾತ್ರಾ ಮಹೋತ್ಸವ 24ರಿಂದ

ಹುಬ್ಬಳ್ಳಿ ಶ್ರೀ ವೀರಭದ್ರೇಶ್ವರ (Fair) ದೇವಸ್ಥಾನ ಟ್ರಸ್ಟ್ ಕಮಿಟಿಯ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಡಾ. ಎನ್.ಎ. ಚರಂತಿಮಠ ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಚಂದ್ರಶೇಖರ ಮಟ್ಟಿ, ಎಸ್.ಎಂ. ರುದ್ರಯ್ಯ, ಬಸವರಾಜ ಕಲ್ಯಾಣಶೆಟ್ಟರ್, ಚಂದ್ರಶೇಖರ ಪಾಟೀಲ, ಬಸವರಾಜ ಚಿಕ್ಕಮಠ ಇದ್ದರು.
ಹುಬ್ಬಳ್ಳಿ ಶ್ರೀ ವೀರಭದ್ರೇಶ್ವರ (Fair) ದೇವಸ್ಥಾನ ಟ್ರಸ್ಟ್ ಕಮಿಟಿಯ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಡಾ. ಎನ್.ಎ. ಚರಂತಿಮಠ ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಚಂದ್ರಶೇಖರ ಮಟ್ಟಿ, ಎಸ್.ಎಂ. ರುದ್ರಯ್ಯ, ಬಸವರಾಜ ಕಲ್ಯಾಣಶೆಟ್ಟರ್, ಚಂದ್ರಶೇಖರ ಪಾಟೀಲ, ಬಸವರಾಜ ಚಿಕ್ಕಮಠ ಇದ್ದರು.
Published on
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ (Fair) ಶ್ರೀ ಸದ್ಗುರು ಸಿದ್ಧಾರೂಢ ಸ್ವಾಮಿ ಮಾರ್ಗದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ, ಅಗ್ನಿ ಮಹೋತ್ಸವ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮ ನ. 24 ಮತ್ತು 25ರಂದು ನಡೆಯಲಿದೆ ಎಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಡಾ. ಎನ್.ಎ. ಚರಂತಿಮಠ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 24ರಂದು ಸಂಜೆ 6 ಗಂಟೆಗೆ ಶಾಸಕ ಪ್ರಸಾದ ಅಬ್ಬಯ್ಯ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡುವರು. ಉದ್ಯಮಿ ರಮೇಶ ಬಾಫಣಾ ಶ್ರೀ ವೀರಭದ್ರೇಶ್ವರ ದೇವರಿಗೆ ನವೀಕರಿಸಿದ ಬಂಗಾರದ ಕಿರೀಟ ಧಾರಣೆ ಮಾಡುವರು. ವಜ್ರ, ರತ್ನ, ಪಚ್ಚ, ಮಾಣಿಕ್ಯ, ನೀಲ, ಗೋಮೇದಕ, ಪುಷ್ಪರಾಗ, ಹವಳಗಳನ್ನು ಕಿರೀಟಕ್ಕೆ ಅಳವಡಿಸಲಾಗಿದೆ ಎಂದು ಹೇಳಿದರು.
ಸಂಜೆ 7 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಕನ್ನಡ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ, ಬಸವರಾಜ ಮಾಮನಿ, ನರಸಿಂಹ ಜೋಶಿ ಇವರಿಂದ ಹಾಸ್ಯ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
25ರಂದು ಸಂಜೆ 6 ಗಂಟೆಗೆ ರಥೋತ್ಸವ ನಡೆಯಲಿದ್ದು, ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಅಧ್ಯಕ್ಷ ಚನ್ನವೀರ ಮುಂಗುರವಾಡಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವೀರಭದ್ರ ದೇವರ ಪಲ್ಲಕ್ಕಿ ಮೆರವಣಿಗೆಯನ್ನು ಗುತ್ತಲದ ಮೈಲಾರ ಶುಗರ್ಸ್ ಎಂಡಿ ಉದಯಕುಮಾರ ಪುರಾಣಿಕಮಠ ಉದ್ಘಾಟಿಸುವರು. ನೂರಾರು ಕಲಾವಿದರು ವಾದ್ಯ-ಮೇಳದೊಂದಿಗೆ ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಮಿಟಿ ಅಧ್ಯಕ್ಷ ಚಂದ್ರಶೇಖರ ಮಟ್ಟಿ, ಉಪಾಧ್ಯಕ್ಷ ಎಸ್.ಎಂ. ರುದ್ರಯ್ಯ, ಬಸವರಾಜ ಕಲ್ಯಾಣಶೆಟ್ಟರ್, ಚಂದ್ರಶೇಖರ ಪಾಟೀಲ, ಈರಣ್ಣ ಬಲೂಚಿಗಿ, ಶಿವಯೋಗಿ ವಿಭೂತಿಮಠ, ಬಸವರಾಜ ಚಿಕ್ಕಮಠ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net