ಹುಬ್ಬಳ್ಳಿ: veershaiv ವೀರಶೈವ ಲಿಂಗಾಯತ ಸೇವಾ ಸಮಿತಿ ವತಿಯಿಂದ ತಾಲೂಕಿನ ಸಮಾಜದ ಎಲ್ಲ ಒಳಪಂಗಡಗಳ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಸಮಾರಂಭ ಮೇ 31ರಂದು ಸಂಜೆ 5ಕ್ಕೆ ಸವಾಯಿ ಗಂಧರ್ವ ಹಾಲ್ನಲ್ಲಿ ಏರ್ಪಡಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಸಾವಕಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎಸ್ಎಸ್ಎಲ್ಸಿ ಹಾಗೂ ದ್ವೀತಿಯ ಪಿಯುನಲ್ಲಿ ಶೇ. 95ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲ ಒಳಪಂಗಡದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು. ಈ ಬಾರಿ 85 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.
ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರು, ಉದ್ಯಮಿಗಳಾದ ವೀರೇಶ ಉಂಡಿ, ಮುರುಗೇಶ ಚನ್ನಣ್ಣವರ, ಗಿರೀಶ ಪಟ್ಟಣಶೆಟ್ಟಿ, ನಾಗರಾಜ ಗೌರಿ, ನಾಗೇಶ ಅಣ್ಣಿಗೇರಿ, ಮಂಜುನಾಥ ಮುನವಳ್ಳಿ, ಸಿಎ ಉತ್ತೀರ್ಣಳಾದ ಸಮೃದ್ಧಿ ಮುಂಗರವಾಡಿ ಅವರಿಗೆ ಗೌರವ ಸನ್ಮಾನ ನೀಡಲಾಗುವುದು ಎಂದರು.
ಉದ್ಘಾಟನೆ ಸಮಾರಂಭದ ಸಾನ್ನಿಧ್ಯವನ್ನು ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ವಹಿಸುವರು.
ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ಪ್ರದಿಪ ಶೆಟ್ಟರ್, ಮಾಜಿ ಶಾಸಕ ಎಂ.ಎಸ್. ಅಕ್ಕಿ ಅತಿಥಿಗಳಾಗಿ ಪಾಲ್ಗೊಳ್ಳುವರು.