ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ Griha Jyoti

Griha Jyoti  ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್. ಅವರು ಹುಬ್ಬಳ್ಳಿಯ ವಿವಿಧೆಡೆ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Griha Jyoti ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್. ಅವರು ಹುಬ್ಬಳ್ಳಿಯ ವಿವಿಧೆಡೆ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪಡಿತರ ಚೀಟಿ ನೀಡಬೇಕು.
  • ಪರಿಶೀಲನಾ ಅರ್ಜಿ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ.
  • ಫಲಾನುಭವಿಗಳ ದಾಖಲೆ ಪರಿಶೀಲನೆ
ಹುಬ್ಬಳ್ಳಿ :
2023ರ ಜುಲೈನಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪರಿಶೀಲನಾ ಕಾರ್ಯ ನಡೆದಿದೆ.
ಹೆಸ್ಕಾಂನ ಮೀಟರ್ ರೀಡರ್​ಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನಾ ಅರ್ಜಿ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ.
ಹೆಸ್ಕಾಂ ಸಿಬ್ಬಂದಿ ಮನೆ ಭೇಟಿ ಸಂದರ್ಭದಲ್ಲಿ ಫಲಾನುಭವಿಗಳು ತಮ್ಮ ಆಧಾರ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ತೋರಿಸಬೇಕು.
ಹೆಸ್ಕಾಂ ಸಿಬ್ಬಂದಿಯು ಮನೆ ಮಾಲೀಕರು ಅಥವಾ ಬಾಡಿಗೆದಾರರಿಂದ ಮಾಹಿತಿ ಪಡೆದು, ಸೇವಾ ಸಿಂಧು ತಂತ್ರಾಂಶದಲ್ಲಿ ದಾಖಲಿಸಲಿದ್ದಾರೆ.
ಪಡಿತರ ಚೀಟಿ ಇದ್ದರೆ ಇದೆ ಎಂಬ ಮಾಹಿತಿ ನೀಡಬೇಕು. ಎಪಿಎಲ್ ಇದ್ದರೆ ಎಪಿಎಲ್ ಕಾರ್ಡ್ ನಂಬರ್ ಅಥವಾ ಬಿಪಿಎಲ್ ಇದ್ದರೆ ಬಿಪಿಎಲ್ ಕಾರ್ಡ್ ನಂಬರ್ ಕೊಡಬೇಕಾಗುತ್ತದೆ. ಯಾವುದೇ ಕಾರ್ಡ್ ಇಲ್ಲದಿದ್ದರೆ, ಅದನ್ನೂ ತಿಳಿಸಬೇಕು ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಫಲಾನುಭವಿ ಗ್ರಾಹಕರು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಸ್ಕಾಂ ಮನವಿ ಮಾಡಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net