(vijayendra) ಬಿಜೆಪಿಗಿದೆ ಗೆಲುವಿನ ವಾತಾವರಣ

ಹುಬ್ಬಳ್ಳಿಯ ಸಿದ್ಧಾರೂಢ ಟಿ ಸೆಂಟರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ  (vijayendra) ಅವರು ಭಾನುವಾರ ಗಿರಿಮಿಟ್, ಭಜ್ಜಿ ಸವಿದರು.
ಹುಬ್ಬಳ್ಳಿಯ ಸಿದ್ಧಾರೂಢ ಟಿ ಸೆಂಟರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (vijayendra) ಅವರು ಭಾನುವಾರ ಗಿರಿಮಿಟ್, ಭಜ್ಜಿ ಸವಿದರು.
Published on
ಹುಬ್ಬಳ್ಳಿ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವಿನ ವಾತಾವರಣವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (vijayendra) ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹವಿದೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನರು ಬೇಸತ್ತಿದ್ದಾರೆ. ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ ಆಡಳಿತ ನಡೆಸಿ ದಾಖಲೆಯ 8,931 ದಿನಗಳನ್ನು ಪೂರೈಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಇದಕ್ಕೂ ಮೊದಲು ಕಾರ್ಯಕರ್ತರೊಂದಿಗೆ ಬಿ.ವೈ. ವಿಜಯೇಂದ್ರ ಅವರು ಗಿರಿಮಿಟ್, ಭಜ್ಜಿ ಸವಿದರು.
ಉಪ ಮೇಯರ್ ಸಂತೋಷ ಚವ್ಹಾಣ, ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಾಜಿ ಶಾಸಕಿ ಸೀಮಾ ಮಸೂತಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net