

ಶಾಸಕ ವಿನಯ ಕುಲಕರ್ಣಿ ಅವರಿಗೆ ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ತೆರವುಗೊಳಿಸಿದೆ. ಆದಾಗ್ಯೂ ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಸ್ವಾಗತ ಮೆರವಣಿಗೆ, ರ್ಯಾಲಿ, ಸಂಭ್ರಮಾಚರಣೆ ಅಥವಾ ಸಾರ್ವಜನಿಕ ಸಭೆ ಆಯೋಜಿಸುವಂತಿಲ್ಲ. ಸಾರ್ವಜನಿಕ ಶಾಂತಿ ಕದಡುವ, ಸಂಚಾರ ಅಥವಾ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.