(vsv prasad) ಕರ್ತವ್ಯ ನಿರತ ಪೊಲೀಸರಿಗೆ ಚಿರಋಣಿಯಾಗಿರಿ

ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಪೊಲೀಸ್ ಧ್ವಜಗಳನ್ನು ಬಿಡುಗಡೆಗೊಳಿಸಿದರು (vsv prasad).
ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಪೊಲೀಸ್ ಧ್ವಜಗಳನ್ನು ಬಿಡುಗಡೆಗೊಳಿಸಿದರು (vsv prasad).
Published on
ಹುಬ್ಬಳ್ಳಿ: ಸಮಾಜಕ್ಕಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟಿರುವ ಪೊಲೀಸರಿಗೆ ನಾವು ಸದಾ ಚಿರಋಣಿಯಾಗಿರಬೇಕು ಎಂದು ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ (vsv prasad) ಡಾ.ವಿ.ಎಸ್.ವಿ. ಪ್ರಸಾದ ಅಭಿಪ್ರಾಯಪಟ್ಟರು.
ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತಾಲಯದಿಂದ ಇಲ್ಲಿಯ ಕಾರವಾರ ರಸ್ತೆಯ ಹಳೆಯ ಸಶಸ್ತ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕುಟುಂಬ ನಿರ್ವಹಣೆಗೆ ಜತೆಗೆ ಸಮಾಜದ ಜವಾಬ್ದಾರಿಯನ್ನೂ ಪೊಲೀಸರು ಅರಿತಿದ್ದಾರೆ. ಮಳೆ, ಚಳಿ, ಬಿಸಿಲು ಲೆಕ್ಕಿಸದೇ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕಟಿಬದ್ಧರಾಗಿದ್ದಾರೆ. ಇಂಥವರಿಗೆ ನಾವು ನಮ್ಮ ಕೈಲಾದಷ್ಟು ಸಹಾಯ ಮಾಡುವುದು ಒಳಿತು ಎಂದು ಸಲಹೆ ನೀಡಿದರು.
ನಿವೃತ್ತ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಎಂ.ಐ. ಪಠಾಣ ಮುಖ್ಯ ಅತಿಥಿಯಾಗಿ ಮಾತನಾಡಿ, ಸಮಾಜದೊಂದಿಗೆ ಪೊಲೀಸರು ಉತ್ತಮ ಬಾಂಧವ್ಯ ಹೊಂದಿರಬೇಕು. ಕಾನೂನು ಪಾಲನೆ, ಸಾರ್ವಜನಿಕ ಆಸ್ತಿ -ಪಾಸ್ತಿಗಳ ಸಂರಕ್ಷಣೆ ಜತೆಗೆ ಜನ ಜೀವನದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಬೇಕು. ಸಾರ್ವಜನಿಕರು ತಮ್ಮ ಅಹವಾಲು ತೆಗೆದುಕೊಂಡು ಪೊಲೀಸ್ ಠಾಣೆಗೆ ಬಂದಾಗ ಅವರ ಸಮಸ್ಯೆಗೆ ತಾಳ್ಮೆಯಿಂದ ವಿಚಾರಿಸಿ, ಸ್ಪಂದಿಸಬೇಕು ಎಂದರು.
ಇಂದಿನ ದಿನಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಹೊಂದಿರುವವರು ಬಹಳಷ್ಟು ವಿದ್ಯಾವಂತರಾಗಿದ್ದಾರೆ. ಸಾಕಷ್ಟು ಕಾನೂನು ಪಾಲನೆ ವಿಷಯಗಳನ್ನು ಅರಿತಿರುತ್ತಾರೆ. ಪೊಲೀಸರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕರ ಹಿತ ಕಾಯುವ ಕೆಲಸ ಪೊಲೀಸ್ ಇಲಾಖೆಯದ್ದು. ಯಾವುದೇ ಸಂಕಷ್ಟ ಬಂದರೂ ತಕ್ಷಣ ಸ್ಪಂದಿಸುತ್ತದೆ. ಎಲ್ಲರೂ ಹಬ್ಬ ಮಾಡುವ ಸಂದರ್ಭದಲ್ಲಿ ಸಮಾಜಕ್ಕಾಗಿ ಸಿಬ್ಬಂದಿ ಹಗಲಿರುಳು ದುಡಿಯುತ್ತಾರೆ. ಪೊಲೀಸರು ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು. ತಮ್ಮ ಜವಾಬ್ದಾರಿ ಅರಿಯಬೇಕು ಎಂದರು.
ನಿವೃತ್ತ ಡಿಐಜಿ ರವಿಕುಮಾರ ನಾಯ್ಕ ಮಾತನಾಡಿದರು.
ಇದೇ ವೇಳೆ ಸಾಂಕೇತಿಕವಾಗಿ ಪೊಲೀಸ್ ಧ್ವಜಗಳನ್ನು ಬಿಡುಗಡೆ ಮಾಡಿ ವಿತರಿಸಲಾಯಿತು. ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣ ನಿಧಿಗೆ ಉದ್ಯಮಿ ಡಾ.ವಿ.ಎಸ್.ವಿ. ಪ್ರಸಾದ 1,11,600 ರೂ., ಜಿಲ್ಲಾ ದಸ್ತು ಬರಹಗಾರರ ಸಂಘದ ಅಧ್ಯಕ್ಷ ಶಾಂತರಾಜ ಪೋಳ 1 ಲಕ್ಷ ರೂ., ನಿವೃತ್ತ ಪೊಲೀಸ್ ಅಧಿಕಾರಿ ವೀರೇಶ ಬೆಳವಡಿ 51 ಸಾವಿರ ರೂ. ಹಾಗೂ ಎಸ್‌ಎಸ್‌ಕೆ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷ ವಿಠ್ಠಲ ಲದ್ವಾ 50 ಸಾವಿರ ರೂ.ಮೊತ್ತದ ಚೆಕ್ ನೀಡಿದರು.
ಪರೇಡ್ ಕಮಾಂಡರ್ ಆರ್‌ಎಸ್‌ಐ ಸಂತೋಷ ಭೋಜಪ್ಪಗೋಳ ನೇತೃತ್ವದಲ್ಲಿ ಪೊಲೀಸ್ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿದವು.
ಡಿಸಿಪಿ ರವೀಶ ಸಿ.ಆರ್., ಎಸಿಪಿಗಳಾದ ಶಿವಾನಂದ ಚಲವಾದಿ, ಉಮೇಶ ಚಿಕ್ಕಮಠ, ಪ್ರಶಾಂತ ಸಿದ್ದನಗೌಡರ ಇತರರಿದ್ದರು.
ಪೊಲೀಸ ಇನ್ಸಪೆಕ್ಟರ್ ಮಾರುತಿ ಗುಳ್ಳಾರಿ ನಿರೂಪಿಸಿದರು. ಡಿಸಿಪಿ ಶ್ರುತಿ ಎನ್.ಎಸ್. ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net