ಕನಿಷ್ಠ ವೇತನ (Wage Revision) ಕಟ್ಟುನಿಟ್ಟಾಗಿ ಜಾರಿಗೆ ಆಗ್ರಹ
ಪರಿಷ್ಕೃತ ಕನಿಷ್ಠ ವೇತನದ (Wage Revision) ಆದೇಶವನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಕಾರ್ವಿುಕರು ಸಿಐಟಿಯು ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಉದ್ಯಮ, ಸಂಸ್ಥೆಗಳ (Wage Revision)ಮಾಲೀಕರ ಯಾವುದೇ ಒತ್ತಡಕ್ಕೆ ಮಣಿಯದೆ ಪರಿಷ್ಕೃತ ಕನಿಷ್ಠ ವೇತನದ ಆದೇಶವನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸ್ಕೀಮ್ ನೌಕರರನ್ನು ಹಾಗೂ ಸ್ವಚ್ಛವಾಹಿನಿ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ತರಬೇಕೆಂದು ಆಗ್ರಹಿಸಿ ಕಾರ್ವಿುಕರು ಸಿಐಟಿಯು ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ತಹಸೀಲ್ದಾರ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ರಾಜ್ಯ ಸರ್ಕಾರ ಮೇ 22ರಂದು ಅಂತಿಮ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಿದ್ದು ಸ್ವಾಗತಾರ್ಹವಾಗಿದ್ದು, ಬೆಲೆ ಏರಿಕೆ ಸೇರಿದಂತೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಲಕ್ಷಾಂತರ ಕಾರ್ವಿುಕರಿಗೆ ಸಹಾಯಕವಾಗಲಿದೆ. ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಯಾವುದೇ ಕಾಲಮಿತಿ ನಿಗದಿ ಮಾಡಿಲ್ಲ. ಇಂದಿನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚ ನಿರ್ವಹಣೆಗೆ 36,000 ರೂ. ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯಿಂದ ಹೊರಗಿಟ್ಟಿರುವ ಗಾರ್ವೆಂಟ್ಸ್, ಪ್ಲಾಂಟೇಷನ್, ಬೀಡಿ, ಕೈಮಗ್ಗ ಮುಂತಾದ 19 ಉದ್ದಿಮೆಗಳಲ್ಲಿಯ ಕಾರ್ವಿುಕರಿಗೆ ಅನ್ಯಾಯವಾಗಲಿದ್ದು. ಇವರಿಗೂ ಜಾರಿ ಮಾಡಬೇಕು. ಕಾರ್ವಿುಕ ಸಂಹಿತೆಗಳಿಗೆ ಕಾರ್ವಿುಕರ ಪರ ತಿದ್ದುಪಡಿಗಳನ್ನು ತಂದು ನಿಯಮಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದೆ.
ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಜಿಲ್ಲಾಧ್ಯಕ್ಷ ಬಿ.ಐ. ಈಳಿಗೇರ, ಮುಖಂಡರಾದ ಬಸವಣ್ಣೆಪ್ಪ ನೀರಲಗಿ, ಗುರುಸಿದ್ದಪ್ಪ ಅಂಬಿಗೇರ, ನಾರಾಯಣ ಆರೇರ, ಮಂಜುನಾಥ ಹುಜರಾತಿ, ಶೋಭಾ ಮೂಲಿಮನಿ, ನೀಲವ್ವ ಕುರುಬರ, ಶಕುಂತಲಾ ಘಾಡಿ, ಮಂಜುನಾಥ ದೊಡಮನಿ, ಮಹೇಶ ಹುಲಗೋಡ, ಗಾಳೆಪ್ಪ ಮುತ್ಯಾಳ, ಇತರರು ಇದ್ದರು.