ಪೆಟ್ರೋಲ್​ಗೆ ಬೆಂಕಿ ತಗುಲಿ ಮಹಿಳೆಗೆ ಗಾಯ

ಪೂರ್ಣಿಮಾ ಕಲ್ಲಪ್ಪ ಹಾದಿಮನಿ
ಪೂರ್ಣಿಮಾ ಕಲ್ಲಪ್ಪ ಹಾದಿಮನಿ
Published on
ಧಾರವಾಡ: ಪೆಟ್ರೋಲ್​ ಸಂಗ್ರಹ ಮಾಡಿದ್ದ ಮನೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮಹಿಳೆಯೊಬ್ಬಳು ತೀವ್ರ ಗಾಯಗೊಂಡ ಘಟನೆ ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ರ್ಪೂಣಿಮಾ ಕಲ್ಲಪ್ಪ ಹಾದಿಮನಿ (32) ಎಂಬುವರು ತೀವ್ರ ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಕಳೆದ ವಾರ ಪೆಟ್ರೋಲ್​, ಡೀಸೆಲ್​ ಅಭಾವ ಕಾಣಿಸಿಕೊಂಡಿದೆ ಎಂಬ ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಈ ಕುಟುಂಬದ ಯಜಮಾನ ಸುಮಾರು 5 ಲೀಟರ್​ ಪೆಟ್ರೋಲ್​ ಸಂಗ್ರಹಿಸಿಟ್ಟುಕೊಂಡಿದ್ದರು. ಅಡುಗೆ ಮನೆಯಲ್ಲಿ ಪೆಟ್ರೋಲ್​ ಕ್ಯಾನ್​ ಇಟ್ಟಿದ್ದರು ಎನ್ನಲಾಗಿದ್ದು, ಆಕಸ್ಮಿಕ ಬೆಂಕಿ ತಗುಲಿ ಮನೆಗೆಲ್ಲ ಆವರಿಸಿದೆ. ಈ ವೇಳೆ ರ್ಪೂಣಿಮಾಗೆ ಬೆಂಕಿ ತಗುಲಿದ್ದು, ಕೂಡಲೇ ಸ್ಥಳಿಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಗಾಯಾಳು ರ್ಪೂಣಿಮಾಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೆಎಂಸಿಆರ್​ಐ ಆಸ್ಪತ್ರೆಗೆ ಸಾಗಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net