ದೇಶ ವಿಭಜನೆಗೊಳ್ಳದಿದ್ದರೆ ಬಿಜೆಪಿ (BJP), ಆರ್​ಎಸ್​ಎಸ್ ಇರುತ್ತಿದ್ದವೇ ?

ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಸಚಿವ ಸಂತೋಷ ಲಾಡ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಅನಿಲಕುಮಾರ ಪಾಟೀಲ, ಮಹೇಂದ್ರ ಸಿಂಘಿ ಹಾಗೂ ಇತರರು ಇದ್ದರು.
ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಸಚಿವ ಸಂತೋಷ ಲಾಡ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಅನಿಲಕುಮಾರ ಪಾಟೀಲ, ಮಹೇಂದ್ರ ಸಿಂಘಿ ಹಾಗೂ ಇತರರು ಇದ್ದರು.
Published on
ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಭಾರತದ ವಿಭಜನೆಗೆ ನೆಹರು ಕಾರಣವೆಂದು ದೂಷಿಸುವ ಬಿಜೆಪಿಯವರು ಈ ಸತ್ಯವನ್ನು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಮುಖಂಡರು ತಮ್ಮ ಮನೆಗಳಲ್ಲಿ ಜವಾಹರಲಾಲ್ ನೆಹರು ಅವರ ಭಾವಚಿತ್ರ ಹಾಕಿಕೊಂಡು ಅವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.
ದೇಶದ ಎಲ್ಲ ಸಮುದಾಯದವರು ಸಮಾನವಾಗಿ ಬಾಳಬೇಕೆಂಬ ಉದ್ದೇಶದಿಂದ ಇಂದಿರಾ ಗಾಂಧಿ ಅವರು ಊಳುವವನೇ ಒಡೆಯ ಕಾಯ್ದೆ ಜಾರಿಗೆ ತಂದರು. ಅದರಿಂದಾಗಿ ಕೋಟ್ಯಾಂತರ ಜನರು ಇಂದಿಗೂ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಎಂದು ಹೇಳಿದರು.
ಬಡ ಜನರಿಗೆ ಹೆಚ್ಚಿನ ಬಡ್ಡಿ ದರದಲ್ಲಿ ಹಣ ನೀಡುತ್ತಿದ್ದ ಲೇವಾದೇವಿಗಾರರಿಂದಲೇ ಜೀತ ಪದ್ಧತಿ ಎಂಬುದನ್ನು ಅರಿತ ಇಂದಿರಾ ಗಾಂಧಿ, ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿದರು ಎಂದರು.
ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗಿನ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದಿಗೂ ಮುಂದುವರೆಸಿದ್ದಾರೆ. ಆ ಎಲ್ಲ ಯೋಜನೆಗಳನ್ನು ತಾವೇ ಜಾರಿಗೊಳಿಸಿದ್ದೆಂಬಂತೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಇಂದಿರಾ ಗಾಂಧಿ ಅವರ ಕಾರ್ಯವೈಖರಿಯನ್ನು ಸ್ವತಃ ಅಟಲ್ ಬಿಹಾರಿ ವಾಜಪೇಯಿ ಅವರೇ ಮೆಚ್ಚಿದ್ದರು. ಆದರೆ, ಇಂದಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಇಂದಿರಾ ಗಾಂಧಿ ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮಾಹಿತಿಯೇ ಇಲ್ಲ ಎಂದರು.
ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾತನಾಡಿ, ದಿ. ಇಂದಿರಾ ಗಾಂಧಿ ಅವರು ದೇಶ ಕಂಡ ಅಪ್ರತಿಮ ನಾಯಕಿ. ಇಡೀ ಪ್ರಪಂಚವೇ ಅವರನ್ನು ಉಕ್ಕಿನ ಮಹಿಳೆಯೆಂದು ಗುಣಗಾನ ಮಾಡುತ್ತಿತ್ತು ಎಂದು ಹೇಳಿದರು.
ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರದ್ದು ಹಿಟ್ಲರ್ ವೈಖರಿ ಆಡಳಿತ. ಚುನಾವಣೆಯಲ್ಲಿ ಸೋಲು, ಗೆಲುವು ಸಹಜ. ಭವಿಷ್ಯದಲ್ಲಿ ಗೆಲ್ಲುತ್ತೇವೆ. ಇಂದಿರಾ ಗಾಂಧಿ ಅವರ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಡಬೇಕು ಎಂದರು.
ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಶಾಕಿರ ಸನದಿ, ಪಾಲಿಕೆಯ ವಿಪಕ್ಷ ನಾಯಕ ಇಮ್ರಾನ್ ಎಲಿಗಾರ, ಮಾಜಿ ಶಾಸಕರಾದ ಎಂ.ಎಸ್. ಅಕ್ಕಿ, ಮೋಹನ ಲಿಂಬಿಕಾಯಿ, ಕಾಂಗ್ರೆಸ್ ಮುಖಂಡರಾದ ಸದಾನಂದ ಡಂಗನವರ, ವಸಂತ ಲದ್ವಾ, ಮಹೇಂದ್ರ ಸಿಂಘಿ, ಸತೀಶ ಮೆಹರವಾಡೆ, ಪಾರಸಮಲ್ ಜೈನ್, ಅಲ್ತಾಫ ಕಿತ್ತೂರ, ರತ್ನಾ ತೇಗೂರಮಠ, ಚೈತ್ರಾ ನಿಂಗದಾಳಕರ, ಬಸವರಾಜ ಗುರಿಕಾರ, ರಾಜಶೇಖರ ಮೆಣಸಿನಕಾಯಿ, ಪ್ರೇಮನಾಥ ಚಿಕ್ಕತುಂಬಳ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net