ಎನ್​ಡಿಎ ಅಭ್ಯರ್ಥಿ ಎಸ್​.ವಿ. ಸಂಕನೂರ ಅಖಾಡಕ್ಕೆ

NDA candidate S.V. Sankanur Nomination
ಕರ್ನಾಟಕ ವಿಧಾನ ಪರಿಷತ್​ ಪಶ್ಚಿಮ ಪದವೀಧರ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಎಸ್​.ವಿ. ಸಂಕನೂರ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ತೆರಳಿದರು.
ಕರ್ನಾಟಕ ವಿಧಾನ ಪರಿಷತ್​ ಪಶ್ಚಿಮ ಪದವೀಧರ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಎಸ್​.ವಿ. ಸಂಕನೂರ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ತೆರಳಿದರು.
Published on: 

ಧಾರವಾಡ: ಕರ್ನಾಟಕ ವಿಧಾನ ಪರಿಷತ್​ ಪಶ್ಚಿಮ ಪದವೀಧರ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಎಸ್​.ವಿ. ಸಂಕನೂರ ಚುನಾವಣಾಧಿಕಾರಿ ಜಾನಕಿ ಕೆ.ಎಂ. ಅವರಿಗೆ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ನಗರದ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಕ್ಷದ ನಾಯಕರೊಂದಿಗೆ ಬೃಹತ್​ ಮೆರವಣಿಗೆಯಲ್ಲಿ ಪಾಲ್ಗೊಂಡರು. ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್​ ಹಾಗೂ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್​ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯಸಭಾ ಸದಸ್ಯ ಮಾ. ನಾಗರಾಜ, ಶಾಸಕರಾದ ಸಿ.ಸಿ. ಪಾಟೀಲ, ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಪ್ರದಿಪ ಶೆಟ್ಟರ್​, ಮಾಜಿ ಶಾಸಕರಾದ ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಸೀಮಾ ಮಸೂತಿ, ಸಿ.ಸಿ. ಪಾಟೀಲ, ಮುಖಂಡರಾದ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net