ಧಾರವಾಡ: ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಬಾಕಿ ಇದ್ದ 54,937 ಪ್ರಕರಣಗಳ ಪೈಕಿ 3,908 ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಂಡು 2,160 ಪ್ರಕರಣ ಹಾಗೂ 31,090 ಪೂರ್ವ ವ್ಯಾಜ್ಯ ಪ್ರಕರಣಗಳ ಪೈಕಿ 27,531 ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸಲಾಯಿತು.
ಧಾರವಾಡ ಕೌಟುಂಬಿಕ ನ್ಯಾಯಾಲಯದಲ್ಲಿ ವೈವಾಹಿಕ- ಜೀವನಾಂಶ ಪ್ರಕರಣಗಳ ಪೈಕಿ 9 ಪ್ರಕರಣಗಳಲ್ಲಿ ದಂಪತಿಯನ್ನು ಒಂದುಗೂಡಿಸಲಾಯಿತು. ಹುಬ್ಬಳ್ಳಿಯ ಕೌಟುಂಬಿಕ ನ್ಯಾಯಾಲಯದಲ್ಲಿ 12 ಪ್ರಕರಣಗಳಲ್ಲಿ ದಂಪತಿ ಹಾಗೂ ಕುಂದಗೋಳ ನ್ಯಾಯಾಲಯದಲ್ಲಿ 2 ಪ್ರಕರಣಗಳಲ್ಲಿ ದಂಪತಿ ಒಂದಾದರು. ಈ ಕುಟುಂಬಗಳಿಗೆ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯ ಎನ್.ವಿ. ವಿಜಯ ಶುಭ ಹಾರೈಸಿದರು. ಇದೇವೇಳೆ 207 ಪ್ರಕರಣಗಳಲ್ಲಿ ಹಿರಿಯ ನಾಗರಿಕರು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಇತ್ಯರ್ಥಪಡಿಸಿಕೊಂಡರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ. ಬಡಿಗೇರ ತಿಳಿಸಿದ್ದಾರೆ.