

ಧಾರವಾಡ: ಧಾರವಾಡ-ಬೆಳಗಾವಿ ರಸ್ತೆಯ ಪೆಪ್ಸಿ ಫ್ಯಾಕ್ಟರಿ ಬಳಿ ಕಾರು-ಬೈಕ್-ಟಾಟಾ ಏಸ್ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.
ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದ ಕಾರು ಎದುರಿಗೆ ಬರುತ್ತಿದ್ದ ಟಾಟಾ ಏಸ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ನರೇಂದ್ರ ಗ್ರಾಮದ ಲಕ್ಷ್ಮಣಗೌಡ ಎಂಬುವವರು ಮೃತಪಟ್ಟಿದ್ದು, ಆರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.