ಬೆಂಗಳೂರಿಗೂ ಕಾಲಿಟ್ಟ ಧರ್ಮದಂಗಲ್; ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅನುಮತಿ ನೀಡದಂತೆ ಮನವಿ

1
Published on

ಬೆಂಗಳೂರು: ಜಾತ್ರಾ ಮಹೋತ್ಸವಗಳ ವಿಚಾರದಲ್ಲಿ ಮುಂದುವರೆದ ಧರ್ಮ ದಂಗಲ್ ಮುಂದುವರಿದಿದೆ. ಜಾತ್ರೆಗಳಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡುವಂತೆ ಬೆಂಗಳೂರಿನ ಭಜರಂಗದಳದಿಂದ ಸರ್ಕಾರಕ್ಕೆ ಮನವಿ ಸಲ್ಲಿಕೆಯಾಗಿದೆ.

ಬೆಂಗಳೂರಿನ ವಿವಿ ಪುರಂನ ಸಜ್ಜನ್ ರಾವ್ ಸರ್ಕಲ್‌ನಲ್ಲಿ ಇರುವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ಬೆಳ್ಳಿತೇರಿನ ಸಂದರ್ಭದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಬೆಂಗಳೂರು ಘಟಕದ ಮುಖಂಡರು ಮನವಿ ಸಲ್ಲಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net