

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೃಷ್ಣನು ಮಹಾಭಾರತ ಯುದ್ಧದಲ್ಲಿ ಧರ್ಮದ ಹಾದಿಯಲ್ಲಿ ನಡೆಯುವ ಪಾಂಡವರ ಪರವಾಗಿ ನಿಂತು ಉತ್ತಮ ಸಂದೇಶಗಳನ್ನು ನೀಡಿದ್ದಾನೆ. ಅಂತಹ ಧರ್ಮ ಸಂದೇಶಗಳು ಸರ್ವಕಾಲಿಕ. ಇಂದಿನ ಸಮಾಜ ಅನುಸರಿಸಬೇಕು ಎಂದು ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಭಗವಾನ್ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗತಿಸಿ ಹೋದ ಸಮಯ ಮರಳಿ ಬಾರದು. ಸಮಯಕ್ಕೆ ಅನುಸಾರವಾಗಿ ನಮ್ಮ ಜೀವನವನ್ನು ರೂಪಿಸಿಕೊಳ್ಳುತ್ತ ಸತ್ಯ ಹಾಗೂ ಧರ್ಮದ ಹಾದಿಯಲ್ಲಿ ನಡೆಯಬೇಕು ಎಂದರು.
ನಿವೃತ್ತ ಶಿಕ್ಷಕ ಎಚ್. ಪರಮೇಶ್ವರಪ್ಪ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿರು.
ಯಾದವ ಸಮಾಜದ ಮುಖಂಡರಾದ ಮಹಾದೇವ ದಂಡಿನ, ಕಾಕಾ ರಂಗಸ್ವಾಮಿ, ಗುರುನಾಥ ಹುಲಗೂರ, ನೇತ್ರಾವತಿ ಗೊಲ್ಲರ, ಸಂತೋಷ ಹಂಚಾಟೆ ಹಾಗೂ ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.