ಇಂದು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮಸಭೆ

Dharmasabha at Biralingeshwar temple today
ಬೀರಲಿಂಗೇಶ್ವರ ಮೂರ್ತಿ
Published on

ಕಲಕೇರಿ: ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರಯುಕ್ತವಾಗಿ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಮೇ. 10 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 9 ಗಂಟೆಗೆ ಪಟ್ಟಾಧಿಕಾರ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ವಾಲಗದ ಕಾರ್ಯಕ್ರಮ ನಡೆಯಲಿದೆ.

ಸಂಜೆ 5 ಗಂಟೆಗೆ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಧರ್ಮಸಭೆ ಕಾರ್ಯಕ್ರಮ ನಡೆಯಲಿದ್ದು, ಧರ್ಮಸಭೆ ಸಾನಿಧ್ಯವನ್ನು ಸರೂರ ಗುರುಪೀಠದ ರೇವಣಸಿದ್ಧೇಶ್ವರ ಶಾಂತಮಯ ಸ್ವಾಮಿಗಳು, ಸಾನಿಧ್ಯವನ್ನು ಹುಲಜಂತಿಯ ಮಾಳಿಂಗರಾಯ ದೇವರು, ಕಲಕೇರಿಯ ಗದ್ದುಗೆಮಠದ ಗುರುಮಡಿವಾಳೇಶ್ವರ ಶಿವಾಚಾರ್ಯರು, ಗುರುಮರುಳಾರಾಧ್ಯರ ಹಿರೇಮಠದ ಸಿದ್ಧರಾಮ ಶಿವಾಚಾರ್ಯರು, ಚಟ್ಟರಕಿಯ ಕೆಂಚಪ್ಪಮುತ್ಯಾ ಪೂಜಾರಿ, ಸರೂರ ಮೂಲಗುರುಪೀಠದ ಸನಯ್ಯಮುತ್ಯಾ ಹಾಲಮತ ವಹಿಸುವರು.

ದೇವಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಅಧ್ಯತೆ ವಹಿಸಲಿದ್ದು, ಉದ್ಘಾಟಕರಾಗಿ ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ ಭಾಗಿಯಾಗುವರು. ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ ಜ್ಯೋತಿ ಬೆಳಗಿಸುವರು. ಡಾ. ವಿರೇಶ ತಳ್ಳೋಳ್ಳಿ ಪುಷ್ಪಾರ್ಚನೆ ಮಾಡುವರು. ಎಂಜಿಎಂಕೆ ಪ.ಪೂ. ಕಾಲೇಜಿನ ಪ್ರಾಚಾರ್ಯ ಎಸ್​.ಕೆ. ಹರನಾಳ ವಿಶೇಷ ಉಪನ್ಯಾಸ ನೀಡಲಿದ್ದು, ವಿವಿಧ ೇತ್ರಗಳ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net