ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಸಿಇಒ ಆತ್ಮಹತ್ಯೆ

Ravindra
Published on

ಬೆಳ್ತಂಗಡಿ: ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ರವೀಂದ್ರ (59) ಬ್ಯಾಂಕ್ ಕಟ್ಟಡದ ಸಭಾಂ ಗಣದಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ಕಚೇರಿಗೆ ಬಂದಿದ್ದು, ಮಧ್ಯಾಹ್ನದ ವೇಳೆ ಕಾಣಿಸದಿದ್ದಾಗ ನೌಕರರೊಬ್ಬರು ಮೊಬೈಲಿಗೆ ಕರೆ ಮಾಡಿದರು. ಆಗ ಸೊಸೈಟಿಯ ಸಭಾಭವನದಲ್ಲಿ ಮೊಬೈಲ್ ರಿಂಗ್ ಆಗುತ್ತಿತ್ತು. ಅಲ್ಲಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳದಲ್ಲಿಯೇ ವಿಷದ ಬಾಟಲಿ ಪತ್ತೆಯಾಗಿದೆ. ಮೇ ತಿಂಗಳ ಕೊನೆಗೆ ಸೇವೆಯಿಂದ ನಿವೃತ್ತರಾಗಲಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net