ರಾಮರಾಜ್ಯದ ಕನಸು ನನಸು: ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ

dharmastala new
Published on

ಬೆಳ್ತಂಗಡಿ: ದುರ್ಗುಣ ತ್ಯಜಿಸಿ ಸದ್ಗುಣ ಮೈಗೂಡಿಸಿಕೊಳ್ಳುವುದೇ ರಾಮಮಂದಿರ ನಿರ್ಮಾಣದ ಉದ್ದೇಶ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಧರ್ಮಸ್ಥಳದಲ್ಲಿ ಬುಧವಾರ ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಸಮಿತಿಯ ನಿಧಿ ಸಮರ್ಪಣಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಮೂಲಕ ಇಂದಿನ ಪ್ರಜಾರಾಜ್ಯದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು. ತಾಯಿ ಮತ್ತು ಜನ್ಮಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾದುದು. ಪ್ರತೀ ಮನೆಯಲ್ಲಿ ಮುಂಜಾನೆ ಮತ್ತು ಮುಸ್ಸಂಜೆ ಪ್ರತಿಯೊಬ್ಬರೂ ರಾಮನಾಮ ಸ್ಮರಣೆ ಮಾಡಬೇಕು. ತನ್ಮೂಲಕ ಧರ್ಮ ಮತ್ತು ಸಂಸ್ಕೃತಿಯ ಪುನರುತ್ಥಾನವಾಗಿ ರಾಮರಾಜ್ಯ ರೂಪುಗೊಳ್ಳಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ನಿಧಿ ಸಮರ್ಪಣೆಗೆ ಚಾಲನೆ ನೀಡಿ ಸರ್ವರೂ ಸಕ್ರಿಯ ಸಹಕಾರ ನೀಡಿ ರಾಮಮಂದಿರ ಶತಮಾನದ ವಿಸ್ಮಯವಾಗಿ ಮಂದಿರವಾಗಿ ಮೂಡಿಬರಬೇಕು ಎಂದರು.

ಶಾಸಕ ಹರೀಶ್ ಪೂಂಜ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವೇಕ್ ಆಳ್ವ, ವಿಶ್ವ ಹಿಂದು ಪರಿಷತ್‌ನ ವಿನಯಚಂದ್ರ, ಬಸವರಾಜ್, ಗಣೇಶ್ ಬೆಳ್ತಂಗಡಿ ಮೊದಲಾದವರು ಉಪಸ್ಥಿತರಿದ್ದರು. ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಎಂ.ಬಿ.ಪುರಾಣಿಕ್ ಸ್ವಾಗತಿಸಿದರು. ವಕೀಲ ಸುಬ್ರಹ್ಮಣ್ಯ ಅಗರ್ತ ವಂದಿಸಿದರು. ನವೀನ್ ನೆರಿಯಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net