ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನದ ಅತಿಥಿಗಳಿಗೆ ಭವ್ಯ ಸ್ವಾಗತ

Dharmastala procession
Published on

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಗುರುವಾರ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸಹಿತ ಗಣ್ಯರನ್ನು ಬೀಡಿನಿಂದ ಅಮೃತವರ್ಷಿಣಿ ಸಭಾಭವನದವರೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.

ಕ್ಷೇತ್ರದ ಆನೆ ಲತಾ, ವಿವಿಧ ಬಿರುದಾವಳಿ, ವಾದ್ಯ, ಬ್ಯಾಂಡ್‌ಸೆಟ್, ಕೊಂಬು, ಕಹಳೆ, ನಿಶಾನಿ, ಮುಂತಾದವು ಮೆರವಣಿಗೆಯಲ್ಲಿ ಸಾಗಿದವು.

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ.ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್, ಬೆಂಗಳೂರು ಎಸ್.ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ರಾಮಚಂದ್ರ ಜಿ.ಭಟ್ಟ, ಸಾಹಿತಿಗಳು ಸಾಗರ ಡಾ.ಸರ್ಫ್ರಾಜ್ ಚಂದ್ರಗುತ್ತಿ, ಮಾನಸಗಂಗೋತ್ರಿ ಜೈನಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಎಂ.ಎಸ್.ಪದ್ಮ, ಶಿವಮೊಗ್ಗ ಕ್ರೈಸ್ತ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವೀರೇಶ್ ವಿ.ಮೋರಾಸ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net