ಧರ್ಮಸ್ಥಳ ಪ್ರಕರಣ ಎನ್‌ಐಎ ತನಿಖೆಗೆ ಆಗ್ರಹ

1skpp1 bjp dharmasthala
ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಶಾಸಕ ಸಿಮೆಂಟ್ ಮಂಜು ಕೇಸರಿ ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.
Published on

ಸಕಲೇಶಪುರ: ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ಎನ್‌ಐಎಗೆ ವಹಿಸಬೇಕೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ನಡೆದ ಧರ್ಮಸ್ಥಳ ಚಲೋ ಯಾತ್ರೆ ಗೆ ತಾಲೂಕಿನ ಮಾರನಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ವತಿಯಿಂದ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದ್ದು, ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಭಕ್ತಾದಿಗಳು ಧರ್ಮಸ್ಥಳಕ್ಕೆ ಹೊರಟಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಡಾ.ವೀರೇಂದ್ರ ಹೆಗ್ಗಡೆ ಅವರು ಜನರ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದು ಧರ್ಮ ಮತ್ತು ಧಾರ್ಮಿಕ ಕೇಂದ್ರಗಳನ್ನು ಗುರಿ ಮಾಡಿ ಚ್ಯುತಿಯಾಗುವಂತಹ ಕೆಲಸ ಮಾಡುತ್ತಿದೆ. ಇದೀಗ ಧರ್ಮಸ್ಥಳ ಮಂಜುನಾಥನ ಸನ್ನಿಧಿ ಬಗ್ಗೆ ಅಪಪ್ರಚಾರ ಮಾಡುವವರಿಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ಧರ್ಮಸ್ಥಳ ಹಿಂದುಗಳ ಶ್ರದ್ಧಾ ಕೇಂದ್ರವಾಗಿದ್ದು, ಶ್ರೀ ಕ್ಷೇತ್ರಕ್ಕೆ ಧಕ್ಕೆ ಬಂದ ಸಂರ್ಧಭರ್ದಲ್ಲಿ ಹಿಂದುಗಳು ಒಂದಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಆದ್ದರಿಂದಲೇ ಹಾಸನ ಜಿಲ್ಲೆಯಿಂದ ಸುಮಾರು 7 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿ ಮಾಸ್ಕ್‌ಮ್ಯಾನ್ ಮುಸುಕು ಹಾಕಿಕೊಂಡು ಆತ ಹೇಳಿದ ಕಡೆಯಲೆಲ್ಲ ನೆಲ ಅಗೆದರೂ ಏನೂ ಸಿಗಲಿಲ್ಲ. ಇದರಿಂದ ಜನರಿಗೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡಿದೆ. ಆದ್ದರಿಂದ ಎನ್‌ಐಎಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಪ್ರಧಾನ ಕಾರ್ಯದರ್ಶಿಯರಾದ ಅಗ್ನಿ ಸೋಮಶೇಖರ್, ಮಧು ಬೊಮ್ಮನಕೆರೆ, ಮುಖಂಡರಾದ ಬ್ಯಾಕರವಳ್ಳಿ ಜಯಣ್ಣ, ಜಯಪ್ರಕಾಶ್ ದೊಡ್ಡದೀಣೆ, ಪುನೀತ್ ಬನ್ನಹಳ್ಳಿ, ಅಲ್ಪ ಸಂಖ್ಯಾತ ಮುಖಂಡ ನೇಮಾನ್ ಶೇಕ್, ಪುರಸಭಾ ಸದಸ್ಯ ಪ್ರದೀಪ್, ನವೀನ್ ಶೆಟ್ಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net