ವಾಜರಹಳ್ಳಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದ ಅನುದಾನ

dharama
Published on

ಯಶವಂತಪುರ : ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಮ್ಮಿಗೇಪುರ ವಾರ್ಡ್‌ನ ವಾಜರಹಳ್ಳಿ ಶ್ರೀರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ 1.5 ಲಕ್ಷ ಅನುದಾನವನ್ನು ನೀಡಲಾಗಿದೆ.

ಚೆಕ್ ಅನ್ನು ಯೋಜನಾಧಿಕಾರಿ ನಾಗವೇಣಿ ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದ ಸಮಿತಿ ಸದಸ್ಯರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಾಗವೇಣಿ, ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕ ಹಾಗೂ ನೆಮ್ಮದಿಯ ಶ್ರದ್ದಾ ಕೇಂದ್ರಗಳಾಗಿದ್ದು, ಶ್ರೀಮಂಜುನಾಥ ಸನ್ನಿಧಾನದಿಂದ ಶ್ರೀರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಹಣ ನೀಡುವ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾಯಕದಲ್ಲಿ ತೊಡಗಿದೆ ಎಂದರು.

ವಾರ್ಡ್ ಸದಸ್ಯೆ ಸೌಮ್ಯ, ಮೇಲ್ವಿಚಾರಕ ಜಿ.ಪಿ. ಪ್ರಸನ್ನ ಕುಮಾರ್ , ಸೇವಾ ಪ್ರತಿನಿಧಿ ಮಂಜುಳಾ, ಕಮಿಟಿ ಅಧ್ಯಕ್ಷರು ,ಕಾರ್ಯದರ್ಶಿಗಳು ಮತ್ತು ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net