ಲಕ್ಷದೀಪೋತ್ಸವ ಸಡಗರಕ್ಕೆ ಪಾದಯಾತ್ರೆಯ ಮೆರುಗು

New Project (32)
Published on

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಉಜಿರೆಯಿಂದ ಧರ್ಮಸ್ಥಳಕ್ಕೆ ಭಕ್ತರು, ಅಭಿಮಾನಿಗಳ ಪಾದಯಾತ್ರೆಗೆ ಉಜಿರೆ ಜನಾರ್ದನ ಭಜನಾ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಚಾಲನೆ ನೀಡಿದರು. ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬದುಕು ಕಟ್ಟೋಣ ತಂಡದ ರಾಜೇಶ್ ಪೈ, ಮೋಹನ್ ಕುಮಾರ್ ಮತ್ತಿತರರು ಇದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕ್ಷೇತ್ರದ ಪರವಾಗಿ ಡಿ.ಹರ್ಷೇಂದ್ರ ಕುಮಾರ್ ಪಾದಯಾತ್ರಿಗಳನ್ನು ವೀಳ್ಯ ನೀಡಿ ಸ್ವಾಗತಿಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ವೀರು ಶೆಟ್ಟಿ, ಪಾರುಪತ್ಯೆದಾರ ಲಕ್ಷ್ಮೀನಾರಾಯಣ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಬದುಕು ಕಟ್ಟೋಣ ತಂಡದ ಸಂಚಾಲಕರಾದ ಮೋಹನ್ ಕುಮಾರ್, ರಾಜೇಶ್ ಪೈ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net