ಗ್ರಾಮೀಣಾಭಿವೃದ್ಧಿಗೆ ಶ್ರಮಿಸುತ್ತಿರುವ ಧರ್ಮಸ್ಥಳ ಸಂಸ್ಥೆ

ತ್ಯಾಗರಾಜ ಕಾಲನಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಹನುಮಂತ ಅಂಗಡಿ ಉದ್ಘಾಟಿಸಿದರು.
ತ್ಯಾಗರಾಜ ಕಾಲನಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಹನುಮಂತ ಅಂಗಡಿ ಉದ್ಘಾಟಿಸಿದರು.
Published on

ಶನಿವಾರಸಂತೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶನಿವಾರಸಂತೆ ವಲಯದ ಸುಳುಗಳಲೆ ಬಿ ಒಕ್ಕೂಟ ವತಿಯಿಂದ ತ್ಯಾಗರಾಜ ಕಾನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತ ಅಂಗಡಿ, ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ ಭಾಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಆ ಮೂಲಕ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಸಂಸ್ಥೆ ಶ್ರಮಿಸುತ್ತಿದೆ ಎಂದು ಹೇಳಿದರು.

ಸ್ವಾತಂತ್ರೃ ದಿನ ಅಂಗವಾಗಿ ಕ್ಷೇತ್ರ ಸ್ವಚ್ಛತಾ ಕಾರ್ಯಕ್ರಮವನ್ನು ವರ್ಷದಲ್ಲಿ ಎರಡು ಬಾರಿ ಹಮ್ಮಿಕೊಳ್ಳಲಾಗುತ್ತಿದ್ದು ಈ ನಿಟ್ಟಿನಲ್ಲಿ ದೇವಸ್ಥಾನ, ಬಸದಿ, ಮಸೀದಿ, ಚರ್ಚ್ ಮುಂತಾದ ಧಾರ್ಮಿಕ ಕೇಂದ್ರ ಸೇರಿದಂತೆ ಇತರ ಕ್ಷೇತ್ರಗಳನ್ನೂ ಶ್ರಮದಾನಕ್ಕೆ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಕಾರ್ಯಕ್ರಮದ ಭಾಗವಾಗಿ ಇಲ್ಲಿನ ಸರ್ಕಾರಿ ಶಾಲೆಯ ಆಟದ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಎಸ್.ಪಿ.ಭಾಗ್ಯಾ, ವಲಯ ಮೇಲ್ವಿಚಾರಕಿ ಜಯಶ್ರೀ, ಒಕ್ಕೂಟದ ಕಾರ್ಯದರ್ಶಿ ಎಸ್.ಪಿ.ದಿವ್ಯಾ, ಸೇವಾ ಪ್ರತಿನಿಧಿ ಎಸ್.ಆರ್.ಶೋಭಾವತಿ, ಶಾಲಾ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಒಕ್ಕೂಟದ ಸದಸ್ಯರಾದ ಸುಮತಿ, ಸಂಧ್ಯಾ, ಭವ್ಯಾ, ಮೋಹನ್, ಶರತ್, ದಿವ್ಯಾ, ಫಾತೀಮಾ, ಕವಿತಾ, ಭಾಗ್ಯಾ, ವೇದಾವತಿ, ಶೈಲಾ, ಚಂದ್ರಮತಿ, ರಾಜು, ಇಸ್ಲಾಮ್, ಅಕ್ಷಯ್ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net