ಧರ್ಮಸ್ಥಳದ ಅಪಪ್ರಚಾರ ಸಲ್ಲ

7Rayabag1
Published on

ರಾಯಬಾಗ: ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ತೇಜೋವಧೆ ಮಾಡುತ್ತಿರುವುದರಿಂದ ಜೈನ ಧರ್ಮದ ಜನರ ಭಾವನೆಗೆ ಧಕ್ಕೆ ಉಂಟಾಗುತ್ತಿದೆ. ಇದನ್ನು ರಾಯಬಾಗ ಅರಿಹಂತ ಚಾರಿಟಬಲ್ ಸಂಸ್ಥೆ ಹಾಗೂ ಜೈನ ಸಮುದಾಯ ತೀವ್ರವಾಗಿ ಖಂಡಿಸುತ್ತದೆ ಎಂದು ಅರಿಹಂತ ಚಾರಿಟಬಲ್ ಸಂಸ್ಥೆ ತಾಲೂಕಾಧ್ಯಕ್ಷ ಡಿ.ಸಿ.ಸದಲಗಿ ಹೇಳಿದರು.

ಪಟ್ಟಣದ ಮಹಾವೀರ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಸರ್ವ ಧರ್ಮಿಯರ ಪವಿತ್ರ ಧರ್ಮಕ್ಷೇತ್ರ. ನ್ಯಾಯ-ಅನ್ಯಾಯ ಪ್ರಶ್ನೆ ಬಂದಾಗ ರಾಜಕಾರಣಿಗಳು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ಮೇಲೆ ಆಣೆ ಪ್ರಮಾಣ ಮಾಡುತ್ತಾರೆ. ಅಂತಹ ಕ್ಷೇತ್ರ ಮತ್ತು ಧರ್ಮಾಧಿಕಾರಿ ಬಗ್ಗೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ.

ಸರ್ಕಾರ ಎಸ್‌ಐಟಿ ರಚನೆ ಮಾಡಿ ಸಂಪೂರ್ಣ ತನಿಖೆಗೆ ಆದೇಶ ನೀಡಿದೆ. ಸೂಕ್ತ ತನಿಖೆಯಿಂದ ಸತ್ಯಾಂಶ ಹೊರ ಬರಲಿ ಎಂಬುವುದು ಎಲ್ಲರ ಆಶಯವಾಗಿದೆ ಎಂದರು.

ಉಪಾಧ್ಯಕ್ಷ ಸಂಜಯ ಬಡೋರೆ, ಕಾರ್ಯದರ್ಶಿ ಮಲ್ಲಪ್ಪ ಖಾನಟ್ಟಿ, ನಿರ್ದೇಶಕರಾದ ಈರಗೌಡ ಪಾಟೀಲ, ಡಿ.ಎಂ.ಶೆಟ್ಟಿ, ಶೀತಲ ಬೇಡಕಿಹಾಳೆ, ಸಂಜಯ ಹಂಜೆ, ಪಾರೀಶ ಉಗಾರೆ, ಭರತೇಶ ಪಾಟೀಲ, ನೇಮಿನಾಥ ಅಸ್ಕಿ, ವರ್ಧಮಾನ ಬನವಣೆ, ಎಸ್.ಟಿ.ಮುನ್ನೊಳಿ, ಜನೇಂದ್ರ ಖೆಮಲಾಪೂರೆ, ಸನ್ಮತಿ ಶೆಟ್ಟಿ, ಸಿದ್ದಪ್ಪ ನಾಗನೂರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net