ಕಲೋತ್ಸವದಲ್ಲಿ ಧರ್ಮತ್ತಡ್ಕ ಪ್ರೌಢಶಾಲೆ ಸಾಧನೆ

Published on

ಕುಂಬಳೆ: ಜಿ.ಎಚ್.ಎಸ್.ಎಸ್. ಉದಿನೂರ್‌ನಲ್ಲಿ ಜರುಗಿದ ಜಿಲ್ಲಾಮಟ್ಟದ ಶಾಲಾ ಕಲೋತ್ಸವ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಡಾನಿಕಾ ಪಹಲ್ ಆರ್. ಪ್ರಥಮ ಸ್ಥಾನ ಗಳಿಸಿದ್ದಾರೆ. ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ವಾನಿಪ್ಪಾಡಿ ವೈಷ್ಣ್ಣವಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಕನ್ನಡ ಕಥಾ ರಚನೆ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ನೂತನ್ ಎಡಕ್ಕಾನ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net