

ಹೆಬ್ರಿ: ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರ ಮುದ್ರಾಡಿ ಹಾಗೂ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ಜುಲೈ 18ರಂದು ಧರ್ಮಯೋಗಿ ಮೋಹನ್ ಸ್ವಾಮೀಜಿ 3ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ನೀಡುವ ಧರ್ಮಯೋಗಿ ಸಮ್ಮಾನ್‌ಗೆ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶ್ರೀಕ್ಷೇತ್ರದ ಧರ್ಮಾಧಿಕಾರಿ ವಿಜಯಕೀರ್ತಿ ಸುಕುಮಾರ್ ಮೋಹನ್ ತಿಳಿಸಿದ್ದಾರೆ.