

ಶಿವಮೊಗ್ಗ: ಹುಬ್ಬಳ್ಳಿ-ಧಾರವಾಡ ಬೈಪಾಸ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಿವಮೊಗ್ಗದ ವೇದಾ ಮಂಜುನಾಥ (48) ಚಿಕಿತ್ಸೆ ಫಲಿಸದೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟರು.
ವೇದಾ ಕುಟುಂಬಸ್ಥರು ಮೂತ್ರಪಿಂಡ ಹಾಗೂ ಯಕೃತ್ಗಳನ್ನು ದಾನ ಮಾಡಿ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ಧಾರವಾಡದ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ 11 ಜನ ಮೃತಪಟ್ಟಿದ್ದರು.
ಅಪಘಾತದಲ್ಲಿ ಗಾಯಗೊಂಡಿದ್ದ ವೇದಾ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೇದಾ ಶಿವಮೊಗ್ಗದ ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ ಅವರ ಸಹೋದರ ಎಚ್.ಎಂ.ಮಲ್ಲಪ್ಪ ಸೊಸೆಯಾಗಿದ್ದು ಪತಿ ಮಂಜುನಾಥ್ ಶಿವಮೊಗ್ಗದಲ್ಲಿ ಅಡಕೆ ಮಂಡಿ ವರ್ತಕರಾಗಿದ್ದಾರೆ.