ಧಾರವಾಡ ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಮೇಳ 21ರಿಂದ 24

14 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೃಷಿ ವಿಶ್ವವಿದ್ಯಾಲಯದಿಂದ ಸೆ. 21ರಿಂದ 24ರವರೆಗೆ ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು' ಧ್ಯೇಯವಾಕ್ಯದೊಂದಿಗೆ ಕೃಷಿ ಮೇಳ ಆಯೋಜಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಪಾಟೀಲ ತಿಳಿಸಿದರು. ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 21ರಂದು ಬೆಳಗ್ಗೆ 10.30ಕ್ಕೆ ಕೃಷಿ ಮೇಳ ವೇದಿಕೆಯಲ್ಲಿ ಬೀಜ ಮೇಳ ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 2.30ರಿಂದ ಕೃಷಿ ಮೇಳ ವೇದಿಕೆಯಲ್ಲಿಆಧುನಿಕ ಕೃಷಿ ತಾಂತ್ರಿಕ ಅಳವಡಿಕೆಯಲ್ಲಿ ಯುವ ಪೀಳಿಗೆ ಮತ್ತು ನವೋದ್ಯಮಿಗಳ ಪಾತ್ರ' ಕುರಿತ ವಿಚಾರಗೋಷ್ಠಿ ನಡೆಯಲಿದೆ. ಮಧ್ಯಾಹ್ನ 3.30ರಿಂದ ರೈತರಿಂದ ರೈತರಿಗಾಗಿ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರು ಅನಿಸಿಕೆ ಹಂಚಿಕೊಳ್ಳಲಿದ್ದಾರೆ ಎಂದರು.
22ರAದು ಬೆಳಗ್ಗೆ 10.30ಕ್ಕೆ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮೇಳ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯ ಸಚೇತಕ ಸಲೀಂ ಅಹ್ಮದ್, ಉಸ್ತುವಾರಿ ಸಚಿವ ಸಂತೋಷ ಲಾಡ್ ಗೌರವ ಉಪಸ್ಥಿತರಿರುವರು. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಕೃಷಿ ಪ್ರಕಟಣೆಗಳನ್ನು ಬಿಡುಗಡೆ ಮಾಡುವರು. ಮಧ್ಯಾಹ್ನ 2.30ಕ್ಕೆ `ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಸಾವಯವ ಹಾಗೂ ನೈಸರ್ಗಿಕ ಕೃಷಿಯ ಪಾತ್ರ' ವಿಚಾರಗೋಷ್ಠಿ, ಮಧ್ಯಾಹ್ನ 3.30ಕ್ಕೆ ರೈತರಿಂದ ರೈತರಿಗಾಗಿ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರು ಅನಿಸಿಕೆ ಹಂಚಿಕೊಳ್ಳುವರು ಎಂದರು.
23ರAದು ಬೆಳಗ್ಗೆ 10ರಿಂದ ವಿವಿಧ ಗೋಷ್ಠಿಗಳು, ಮಧ್ಯಾಹ್ನ 3.30ಕ್ಕೆ ಪ್ರಗತಿಪರ ರೈತರು ಅನಿಸಿಕೆ ಹಂಚಿಕೊಳ್ಳುವರು. 24ರಂದು ಬೆಳಗ್ಗೆ 10.30ರಿಂದ ಕೃಷಿ ಗೋಷ್ಠಿಗಳು, ಮಧ್ಯಾಹ್ನ 2.30 ಗಂಟೆಗೆ ಪ್ರಗತಿಪರ ರೈತರಿಂದ ಅನಿಸಿಕೆ ಹಂಚಿಕೊಳ್ಳುವರು. ಸಂಜೆ 4.30ಕ್ಕೆ ಕೃಷಿ ಮೇಳ ಸಮಾರೋಪ ಸಮಾರಂಭ ಜರುಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net