

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್- ಉಪ ಮೇಯರ್ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರಗೆ ಮತ ಚಲಾಯಿಸಲು ತಡೆಹಿಡಿದಿದ್ದ ಆದೇಶವನ್ನು ಹೈಕೋರ್ಟ್ ಪೀಠ ತಳ್ಳಿ ಹಾಕಿದೆ.
ಪಾಲಿಕೆ ಆಯುಕ್ತ ಡಾ. ಬಿ. ಗೋಪಾಲಕೃಷ್ಣ ಅವರು ಸಂಕನೂರ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದರು. ಇದನ್ನು ಪ್ರಶ್ನಿಸಿ ಸಂಕನೂರ ಧಾರವಾಡ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಽÃಶ ಪ್ರದೀಪಸಿಂಗ್ ಯರೂರ ಪಾಲಿಕೆ ಆಯುಕ್ತರ ಆದೇಶಕ್ಕೆ ತಡೆ ನೀಡಿದ್ದಾರೆ. ಮೇಯರ್- ಉಪ ಮೇಯರ್ ಚುನಾವಣೆಯಲ್ಲಿ ಸಂಕನೂರಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಿದ್ದಾರೆ. ಸಂಕನೂರ ಪರ ವಕೀಲ ಶ್ರೀರಂಗ, ಇತರರು ವಾದ ಮಂಡಿಸಿದರು.