ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ; ಧಾರವಾಡ ಕೃಷಿ ಮೇಳ ಸೆ. 9ರಿಂದ 12

DSC_9533
Published on

ಧಾರವಾಡ: ಪ್ರಸಕ್ತ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಆಚರಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಕೃಷಿ ವಿಶ್ವವಿದ್ಯಾಲಯದಿಂದ ಸೆ. 9ರಿಂದ 12ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು' ಎಂಬ ಶಿರ್ಷಿಕೆಯಡಿ ಕೃಷಿ ಮೇಳ ಆಯೋಜಿಸಲಾಗಿದೆ ಎಂದು ಕೃಷಿ ವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ ಹೇಳಿದರು.

ನಗರದ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೯ರಂದು ಬೆಳಗ್ಗೆ ೧೦.೩೦ಕ್ಕೆ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಫಲಪುಷ್ಪ, ಗಡ್ಡೆ- ಗೆಣಸು ಪ್ರದರ್ಶನ, ವಿಸ್ಮಯಕಾರಿ ಕೀಟ ಪ್ರಪಂಚ ಪ್ರದರ್ಶನ ಉದ್ಘಾಟನೆಗೊಳ್ಳುವುದು. ಕೃಷಿಮೇಳದ ಮುಖ್ಯ ವೇದಿಕೆಯಲ್ಲಿ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮೇಳ ಉದ್ಘಾಟಿಸುವರು. ಕೃಷಿ ಸಚಿವ ಚೆಲುವರಾಯಸ್ವಾಮಿ, ಉಸ್ತುವಾರಿ ಸಚಿವ ಸಂತೋಷ ಲಾಡ್, ಇತರರು ಉಪಸ್ಥಿತರಿರುವರು. ನಂತರ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಹಾಗೂ ಕೃಷಿ ಮಹಿಳೆ ಪ್ರಶಸ್ತಿ ಪ್ರದಾನ ಮಾಡುವರು ಎಂದರು. ಸೆ. ೧೦ರಂದು ಬೆಳಗ್ಗೆ ೧೧.೩೦ ಗಂಟೆಗೆ ಕೃಷಿಮೇಳ ವೇದಿಕೆಯಲ್ಲಿ ಬೀಜ ಮೇಳ ಉದ್ಘಾಟನೆ, ಮಧ್ಯಾಹ್ನ ೨.೩೦ರಿಂದಬದಲಾಗುತ್ತಿರುವ ಜೀವನಶೈಲಿ ಹಾಗೂ ಹವಾಮಾನ ವೈಪರೀತ್ಯ' ಕುರಿತು ವಿಚಾರಗೋಷ್ಠಿ, ಸೆ. ೧೧ರಂದು ಬೆಳಗ್ಗೆ ೧೧.೩೦ರಿಂದ ಪೌಷ್ಠಿಕತೆ ಹಾಗೂ ಆರ್ಥಿಕ ಭದ್ರತೆಗೆ ಸಿರಿಧಾನ್ಯಗಳು' ವಿಚಾರ ಸಂಕಿರಣ, ಮಧ್ಯಾಹ್ನ ೪.೩೦ಕ್ಕೆ ಕನ್ನಡ ಕೃಷಿ ಗೋಷ್ಠಿಯಲ್ಲಿಡಾ. ಚೆನ್ನವೀರ ಕಣವಿ' ಕೃಷಿ ಲೇಖನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಸೆ. ೧೨ರಂದು ಬೆಳಗ್ಗೆ ೧೧.೩೦ರಿಂದ `ಎಣ್ಣೆಕಾಳು ಬೆಳೆಗಳ ವೃದ್ಧಿ ರೈತರ ಅಭಿವೃದ್ಧಿ' ಚರ್ಚಾಗೋಷ್ಠಿ, ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ಜರುಗುವುದು ಎಂದು ಡಾ. ಪಾಟೀಲ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net